ದೇಶ

ನನಗೆ 205 ಶಾಸಕರ ಬೆಂಬಲ ಇದೆ: ರಾಜ್ಯಪಾಲರಿಗೆ ಅಖಿಲೇಶ್ ಯಾದವ್

ಸಮಾಜವಾದಿ ಪಕ್ಷದಲ್ಲಿನ ಭಿನ್ನಮತ ಹಾಗೂ ಅಸ್ಥಿರತೆ ಉಂಟಾಗಿದ್ದ ಹಿನ್ನೆಲೆಯಲ್ಲಿ ರಾಜ್ಯಪಾಲ ರಾಮ್ ನಾಯಕ್ ಅವರನ್ನು ಭೇಟಿ..

ನನಗೆ 205 ಶಾಸಕರ ಬೆಂಬಲ ಇದೆ: ರಾಜ್ಯಪಾಲರಿಗೆ ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
Published On :
ನವದೆಹಲಿ: ಸಮಾಜವಾದಿ ಪಕ್ಷದಲ್ಲಿನ ಭಿನ್ನಮತ ಹಾಗೂ ಅಸ್ಥಿರತೆ ಉಂಟಾಗಿದ್ದ ಹಿನ್ನೆಲೆಯಲ್ಲಿ ರಾಜ್ಯಪಾಲ ರಾಮ್ ನಾಯಕ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ತಮಗೆ ಬಹುಮತವಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಶಿವಪಾಲ್ ಯಾದವ್ ಹಾಗೂ ಅಖಿಲೇಶ್ ಯಾದವ್ ಮಧ್ಯ ತೀವ್ರ ಜಟಾಪಟಿ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಸಿಎಂ ರಾಜ್ಯಪಾಲರನ್ನು ಭೇಟಿ ಮಾಡಿದ್ದು ತೀವ್ರ ಕುತೂಹಲ ಮೂಡಿಸಿತ್ತು.
224 ಸಮಾಜವಾದಿ ಪಕ್ಷದ ಶಾಸಕರ ಪೈಕಿ ತಮಗೆ 205 ಶಾಸಕರ ಬೆಂಬಲವಿರುವ ಬಗ್ಗೆ ಸಿಎಂ ಅಖಿಲೇಶ್ ಯಾದವ್ ಅವರು ರಾಜ್ಯಪಾಲರಿಗೆ ಪತ್ರ ನೀಡಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ, ಅಲ್ಲದೆ ಪ್ರಸ್ತೂತ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಸಿಎಂ ರಾಜ್ಯಪಾಲರಿಗೆ ವಿವರಣೆ ನೀಡಿದ್ದಾರೆ ಎಂದು ರಾಜಭವನ ಮೂಲಗಳು ತಿಳಿಸಿವೆ
ರಾಜ್ಯಪಾಲರ ಭೇಟಿಗೂ ಮುನ್ನ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿದ್ದ ಅಖಿಲೇಶ್ ಯಾದವ್ ಅವರಿಗೆ ಬಹುತೇಕ ಶಾಸಕರು ಬೆಂಬಲ ನೀಡಿದ್ದಾರೆ. ಸಮಾಜವಾದಿ ಪಕ್ಷದ ಪ್ರಭಾವಿ ನಾಯಕ ಸಚಿವ ಅಜಂ ಖಾನ್ ಸಹ ಬಹಿರಂಗವಾಗಿಯೇ ಅಖಿಲೇಶ್ ಪರವಾಗಿ ಮಾತನಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.