ದೇಶ

2017ರ ಜ.1ರಿಂದ ಎಲ್ಲಾ ಸ್ಮಾರ್ಟ್ ಫೋನ್‌ಗಳಲ್ಲಿ ಪ್ಯಾನಿಕ್ ಬಟನ್ ಅಳವಡಿಕೆ

ತುರ್ತು ಸಂದರ್ಭದಲ್ಲಿ ತ್ವರಿತ ಸಹಾಯಕ್ಕೆ ಅನುಕೂಲವಾಗುವಂತೆ ಎಲ್ಲಾ ರೀತಿಯ ಸ್ಮಾರ್ಟ್ ಮತ್ತು ಮೊಬೈಲ್ ಫೋನ್ ಗಳಲ್ಲಿ 2017ರ ಜನವರಿ 1ರಿಂದ ಪ್ಯಾನಿಕ್ ಬಟನ್...

2017ರ ಜ.1ರಿಂದ ಎಲ್ಲಾ ಸ್ಮಾರ್ಟ್ ಫೋನ್‌ಗಳಲ್ಲಿ ಪ್ಯಾನಿಕ್ ಬಟನ್ ಅಳವಡಿಕೆ
ಮೊಬೈಲ್
Published On :
ನವದೆಹಲಿ: ತುರ್ತು ಸಂದರ್ಭದಲ್ಲಿ ತ್ವರಿತ ಸಹಾಯಕ್ಕೆ ಅನುಕೂಲವಾಗುವಂತೆ ಎಲ್ಲಾ ರೀತಿಯ ಸ್ಮಾರ್ಟ್ ಮತ್ತು ಮೊಬೈಲ್ ಫೋನ್ ಗಳಲ್ಲಿ 2017ರ ಜನವರಿ 1ರಿಂದ ಪ್ಯಾನಿಕ್ ಬಟನ್ ಕಡ್ಡಾಯವಾಗಿರಲಿದೆ ಎಂದು ಪೊಲೀಸರು ದೆಹಲಿ ಹೈಕೋರ್ಟ್ ಗೆ ತಿಳಿಸಿದ್ದಾರೆ. 
ಪ್ರಮುಖವಾಗಿ ಮಹಿಳೆಯ ಹಿತದೃಷ್ಠಿಯಿಂದ ಎಲ್ಲಾ ಸ್ಮಾರ್ಟ್ ಫೋನ್ ಗಳಲ್ಲಿ ಪ್ಯಾನಿಕ್ ಬಟನ್ ಹೊಂದಲಿವೆ. ತುರ್ತು ಸಹಾಯಕ ನಂಬರ್ ಗಳಾದ 100, 101, 102, ಮತ್ತು 108 ಜತೆಗೆ 112 ಸಿಂಗಲ್ ನಂಬರ್ ಅನ್ನು ಅಳವಡಿಸಲಾಗುವುದು ಎಂದು ದೆಹಲಿ ಪೊಲೀಸರು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಗಳಾದ ಬಿ.ಡಿ ಅಹ್ಮದ್, ಮತ್ತು ಅಶುತೋಷ್ ಕುಮಾರ್ ಅವರನ್ನೊಳಗೊಂಡ  ವಿಭಾಗೀಯ ಪೀಠಕ್ಕೆ ಮಾಹಿತಿ ನೀಡಿದರು. 
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿನಿತ್ಯ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಯಲು ಮೊಬೈಲ್ ಫೋನ್ ಗಳಲ್ಲಿ ಪ್ಯಾನಿಕ್ ಬಟನ್ ಅನ್ನು ಕಡ್ಡಾಯವಾಗಿ ಅಳವಡಿಕೆ ಮಾಡಬೇಕು ಎಂದು ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ ರಾಜ್ಯಸಭೆಯಲ್ಲಿ ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.