ರಾಜಧಾನಿಯಲ್ಲೇ ಪಾಕಿಸ್ತಾನ ಪರ ಬೇಹುಗಾರಿಕೆ: ಆರೋಪ ತಳ್ಳಿಹಾಕಿದ ಅಬ್ದುಲ್ ಬಸಿತ್
ಕೆಳಗೆ ಬಿದ್ದರೂ ಮೀಸೆ ಮಣ್ಣಗಾಗಲಿಲ್ಲ ಎಂಬಂತೆ ತನ್ನ ಹಳೆಯ ಚಾಳಿಯನ್ನು ಪಾಕಿಸ್ತಾನ ಮುಂದುವರೆಸಿದ್ದು, ಮಾಡಿದ ತಪ್ಪನ್ನು ಒಪ್ಪಿಕೊಂಡು ತಲೆತಗ್ಗಿಸುವ ಬದಲು ಭಾರತದ ವಿರುದ್ಧವೇ...

ನವದೆಹಲಿ: ಕೆಳಗೆ ಬಿದ್ದರೂ ಮೀಸೆ ಮಣ್ಣಗಾಗಲಿಲ್ಲ ಎಂಬಂತೆ ತನ್ನ ಹಳೆಯ ಚಾಳಿಯನ್ನು ಪಾಕಿಸ್ತಾನ ಮುಂದುವರೆಸಿದ್ದು, ಮಾಡಿದ ತಪ್ಪನ್ನು ಒಪ್ಪಿಕೊಂಡು ತಲೆತಗ್ಗಿಸುವ ಬದಲು ಭಾರತದ ವಿರುದ್ಧವೇ ಹರಿಹಾಯುವ ಮೂಲಕ ಪಾಕಿಸ್ತಾನ ರಾಯಭಾರಿ ಅಬ್ದುಲ್ ಬಸಿತ್ ಅವರು ತಮ್ಮ ಭಂಡತನವನ್ನು ಪ್ರದರ್ಶಸಿದ್ದಾರೆ.
ರಕ್ಷಣಾ ಸಚಿವಾಲಯದ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸಿಸುತ್ತಿದ್ದ ಪಾಕಿಸ್ತಾನ ದೂತವಾಸ ಅಧಿಕಾರಿ ಅಖ್ರರ್ ಅವರ ವಿರುದ್ಧದ ಆರೋಪವನ್ನು ಬಸಿತ್ ಅವರು ತಿರಸ್ಕರಿಸಿದ್ದಾರೆ.
ಆರೋಪ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ತನ್ನ ರಾಜತಾಂತ್ರಿಕ ಸ್ಥಾನಮಾನಕ್ಕೆ ಧಕ್ಕೆ ಬರುವಂತಹ ಕೆಲಸವನ್ನು ಪಾಕಿಸ್ತಾನ ಎಂದಿಗೂ ಮಾಡುವುದಿಲ್ಲ. ಪಾಕಿಸ್ತಾನ ರಾಯಭಾರಿ ಅಧಿಕಾರಿಗಳನ್ನು ವಶಕ್ಕೆ ಪಡೆದು, ಹಲ್ಲೆ ನಡೆಸಿರುವ ವಿದೇಶಾಂಗ ಸಚಿವ ಜೈಶಂಕರ್ ಅವರ ನಡೆಯನ್ನು ನಾವು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.
ಕಾಶ್ಮೀರದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ದೌರ್ಜನ್ಯದ ಕುರಿತು ವಿಶ್ವದ ಗಮನವನ್ನು ಬೇರೆಡೆ ಸೆಳೆಯು ಭಾರತ ಮಾಡಿರುವ ಕುತಂತ್ರ ಇದಾಗಿದ್ದು, ದೂತವಾಸ ಸಿಬ್ಬಂದಿಗಳನ್ನು ಅಕ್ರಮವಾಗಿ ಬಂಧಿಸಿ ಹಲ್ಲೆ ನಡೆಸಿರುವುದು 1961ರ ವೆಯೆನ್ನಾ ಒಡಂಬಡಿಕೆಯನ್ನು ಉಲ್ಲಂಘನೆ ಮಾಡಿದಂತಾಗಿದೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


