ದೇಶ

ಬಿಎಸ್ಪಿ ಅಧಿಕಾರಕ್ಕೆ ಬಂದರೆ ಅಖಿಲೇಶ್ ಆರ್ಥಿಕ ನಿರ್ಧಾರಗಳ ಬಗ್ಗೆ ತನಿಖೆ: ಮಾಯವತಿ

ಬಿಎಸ್ಪಿ ಅಧಿಕಾರಕ್ಕೆ ಬಂದರೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು...

ಬಿಎಸ್ಪಿ ಅಧಿಕಾರಕ್ಕೆ ಬಂದರೆ ಅಖಿಲೇಶ್ ಆರ್ಥಿಕ ನಿರ್ಧಾರಗಳ ಬಗ್ಗೆ ತನಿಖೆ: ಮಾಯವತಿ
ಮಾಯಾವತಿ
Published On :
ಲಖನೌ: ಬಿಎಸ್ಪಿ ಅಧಿಕಾರಕ್ಕೆ ಬಂದರೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ತೆಗೆದುಕೊಂಡ ವಿವಿಧ ಆರ್ಥಿಕ ನಿರ್ಧಾರಗಳ ಬಗ್ಗೆ ತನಿಖೆ ನಡೆಸುವುದಾಗಿ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಅವರು ಹೇಳಿದ್ದಾರೆ.
ಅಖಿಲೇಶ್ ಯಾದವ್ ಅವರ ಪಕ್ಷ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದಿರುವ ಮಾಯಾವತಿ, ಚುನಾವಣೆಗಾಗಿ ಸಿಎಂ ದೊಡ್ಡ ದೊಡ್ಡ ಹಣಕಾಸು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಬಿಎಸ್ಪಿ ಸರ್ಕಾರ ಈ ಬಗ್ಗೆ ತನಿಖೆ ನಡೆಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಧಾನಸಭೆ ಚುನಾವಣೆಗೆ ಕ್ಷಣಗಣೆನೆ ಆರಂಭವಾಗಿರುವ ಹೊತ್ತಿನಲ್ಲಿ ಅಖಿಲೇಶ್ ಯಾದವ್ ಅವರು ವಿವಿಧ ಸಮಾಜದ ಮತದಾರರನ್ನು ಓಲೈಸಲು 'ಡ್ರಾಮಾ' ಮಾಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಮಾಜವಾದಿ ಪಕ್ಷದ ಸರ್ಕಾರ ಗ್ರಾಮ ಪ್ರಧಾನರ ಗೌರವಧನವನ್ನು 2,500ರಿಂದ 3,000ಕ್ಕೆ ಏರಿಕೆ ಮತ್ತು ಶಾಲಾ ಮಕ್ಕಳಿಗೆ ಸ್ಲೀಟ್ ಪ್ಲೇಟ್ ಹಾಗೂ ಗ್ಲಾಸ್ ಗಳನ್ನು ವಿತರಿಸುವು ಮೂಲಕ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ ಎಂದು ಮಾಯಾವತಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.