ದಾಳಿಗೆ ದಿಟ್ಟ ಉತ್ತರ: ಗಡಿಯಲ್ಲಿ ಪಾಕಿಸ್ತಾನದ 4 ಕ್ಯಾಂಪ್'ಗಳು ನಾಶ
ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ಗಳ ದಾಳಿ ನಡೆಯುತ್ತಿದ್ದ ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಗಡಿ ನಿಯಂತ್ರಣ ರೇಖೆ ಬಳಿಯಿದ್ದ ಪಾಕಿಸ್ತಾನದ ನಾಲ್ಕು ಕ್ಯಾಂಪ್ ಗಳನ್ನು ನಾಶಪಡಿಸಿದೆ...

ಶ್ರೀನಗರ: ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ಗಳ ದಾಳಿ ನಡೆಯುತ್ತಿದ್ದ ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಗಡಿ ನಿಯಂತ್ರಣ ರೇಖೆ ಬಳಿಯಿದ್ದ ಪಾಕಿಸ್ತಾನದ ನಾಲ್ಕು ಕ್ಯಾಂಪ್ ಗಳನ್ನು ನಾಶಪಡಿಸಿದೆ.
ಸೀಮಿತ ದಾಳಿ ಬಳಿಕ ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡಿರುವ ಪಾಕಿಸ್ತಾನ ಸೇನೆ, ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ. ನಿನ್ನೆ ನಡೆದ ಗುಂಡಿನ ದಾಳಿಯಲ್ಲಿಯೂ ಭಾರತೀಯ ಯೋಧನನ್ನು ಪಾಕಿಸ್ತಾನದ ಉಗ್ರರು ಭೀಕರವಾಗಿ ಹತ್ಯೆ ಮಾಡಿದ್ದರು. ಯೋಧನ ದೇಹವನ್ನು ತುಂಡರಿಸಿದ್ದರು.
ಇದಕ್ಕೆ ಪ್ರತೀಕಾರವೆಂಬಂತೆ ಭಾರತೀಯ ಸೇನೆ ಪ್ರತ್ಯುತ್ತರವನ್ನು ನೀಡಿದ್ದು, ಕೇರಾನ್ ಸೆಕ್ಟರ್ ನ ಗಡಿ ನಿಯಂತ್ರಣದಲ್ಲಿದ್ದ ಪಾಕಿಸ್ತಾನ ಸೈನಿಕರ ಕ್ಯಾಂಪ್ ಗಳ ಮೇಲೆ ಭಾರೀ ಪ್ರಮಾಣದಲ್ಲಿ ಗುಂಡಿನ ದಾಳಿ ಮಾಡಿ ನಾಲ್ಕು ಕ್ಯಾಂಪ್ ಗಳನ್ನು ನಾಶಪಡಿಸಿದೆ ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ.
ಪಾಕಿಸ್ತಾನ ಸೇನೆ ಗಡಿಯಲ್ಲಿ ಭಾರೀ ಪ್ರಮಾಣದಲ್ಲಿ ಅಪ್ರಚೋದಿತ ಗುಂಡಿನ ದಾಳಿಯನ್ನು ನಡೆಸುತ್ತಿದೆ. ಅಲ್ಲದೆ ಕೆರನ್ ಸೆಕ್ಟರ್ ಬಳಿ ಸಾಕಷ್ಟು ಬಾರಿ ಕದನ ವಿರಾಮವನ್ನು ಉಲ್ಲಂಘಿಸುತ್ತಿದೆ. ಪಾಕಿಸ್ತಾನ ಸೇನೆಯ ದಾಳಿಗೆ ಓರ್ವ ಯೋಧ, ನಾಗರೀಕರೊಬ್ಬರು ಗಾಯಗೊಂಡಿದ್ದಾರೆ. ಪಾಕಿಸ್ತಾನ ಸೈನಿಕರ ದಾಳಿಗೆ ಭಾರತೀಯ ಸೇನೆ ಕೂಡ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


