ಹಕ್ಕಿ ಜ್ವರ ಭೀತಿ: ಇಂದಿರಾಗಾಂಧಿ ಹುತಾತ್ಮ ದಿನಾಚರಣೆ ರದ್ಧು
ಹಕ್ಕಿ ಜ್ವರ ಭೀತಿಯಿಂದಾಗಿ ಈ ವರ್ಷ ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹುತಾತ್ಮ ದಿನಾಚರಣೆ ಆಚರಣೆಯನ್ನು ರದ್ಧು ಮಾಡಲಾಗಿದೆ ಎಂದು ಕಾಂಗ್ರೆಸ್ ...

ನವದೆಹಲಿ: ಹಕ್ಕಿ ಜ್ವರ ಭೀತಿಯಿಂದಾಗಿ ಈ ವರ್ಷ ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹುತಾತ್ಮ ದಿನಾಚರಣೆ ಆಚರಣೆಯನ್ನು ರದ್ಧು ಮಾಡಲಾಗಿದೆ ಎಂದು ಕಾಂಗ್ರೆಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಪ್ರತಿ ವರ್ಷ ಅಕ್ಟೋಬರ್ 31 ರಂದು ಶಕ್ಥಿ ಸ್ಥಳದಲ್ಲಿ ಇಂದಿರಾಗಾಂಧಿ ಹುತಾತ್ಮ ದಿನಾಚರಣೆ ಆಚರಿಸಲಾಗುತ್ತಿತ್ತು. ಆದರೆ ಎಲ್ಲೆಡೆ ಹಕ್ಕಿ ಜ್ವರ ಭೀತಿ ಆವರಿಸಿರುವುದರಿಂದ ಈ ವರ್ಷ ಕಾರ್ಯಕ್ರಮವನ್ನು ರದ್ಧುಗೊಳಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.
ಪಶ್ಚಿಮ ವಿಹಾರ ಪಾರ್ಕ್ ನಲ್ಲಿ ಎರಡು ಹಕ್ಕಿಗಳು ಹಾಗೂ ಶಕ್ತಿ ಸ್ಥಳದ ಬಳಿಯಿರುವ ಸರೋವರದಲ್ಲಿ ಒಂದ ಹಕ್ಕಿ ಸಾವನ್ನಪ್ಪಿದೆ. ಸುಮಾರು 75 ಹಕ್ಕಿಗಳು ಇಲ್ಲಿಯವರೆಗೂ ಸಾವನ್ನಪ್ಪಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


