ಕೇಜ್ರಿವಾಲ್ ರಿಂದ ನ್ಯಾಯಾಧೀಶರ ಫೋನ್ ಕದ್ದಾಲಿಕೆ ಆರೋಪ ತಳ್ಳಿಹಾಕಿದ ಕೇಂದ್ರ ಸಚಿವ
ಕೇಂದ್ರ ಸರ್ಕಾರ ನ್ಯಾಯಾಧೀಶರ ದೂರವಾಣಿ ಕರೆಯನ್ನು ಕದ್ದಾಲಿಸುತ್ತಿದೆ ಎಂಬ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ...

Published On :
ನವದೆಹಲಿ: ಕೇಂದ್ರ ಸರ್ಕಾರ ನ್ಯಾಯಾಧೀಶರ ದೂರವಾಣಿ ಕರೆಯನ್ನು ಕದ್ದಾಲಿಸುತ್ತಿದೆ ಎಂಬ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಪವನ್ನು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಸೋಮವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.
ಕೇಜ್ರಿವಾಲ್ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ರವಿಶಂಕರ್ ಪ್ರಸಾದ್ ಅವರು, ನ್ಯಾಯಾಧೀಶರ ಫೋನ್ ಕದ್ದಾಲಿಸಲಾಗುತ್ತಿದೆ ಎಂಬ ಆರೋಪವನ್ನು ನಾನು ಸ್ಪಷ್ಟವಾಗಿ ನಿರಾಕರಿಸುತ್ತೇನೆ ಎಂದಿದ್ದಾರೆ.
ನಿನ್ನೆ ದೆಹಲಿ ಹೈಕೋರ್ಟ್ ನ 50ನೇ ವಾರ್ಷಿಕೋತ್ಸವದಲ್ಲಿ ಮಾತನಾಡಿದ್ದ ದೆಹಲಿ ಸಿಎಂ, ನ್ಯಾಯಾಧೀಶರ ದೂರವಾಣಿ ಕರೆಯನ್ನು ಕದ್ದಾಲಿಸಲಾಗುತ್ತಿದೆ ಎಂಬ ವರದಿಗಳಿವೆ. ಒಂದು ವೇಳೆ ಇದು ನಿಜವಾಗಿದ್ದರೆ, ನ್ಯಾಯಾಂಗದ ಮೇಲೆ ಇದೊಂದು ದೊಡ್ಡ ಹಲ್ಲೆ ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅರವಿಂದ್ ಕೇಜ್ರಿವಾಲ್Arvind KejriwaljudgesRavi Shankar Prasadರವಿಶಂಕರ್ ಪ್ರಸಾದ್ನ್ಯಾಯಾಧೀಶರುಫೋನ್ ಕದ್ದಾಲಿಕೆphones tapped
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


