ಹುತಾತ್ಮ ಯೋಧ ನಿತಿನ್ ಸುಭಾಷ್'ಗೆ ಭಾವಪೂರ್ಣ ವಿದಾಯ
ದೇಶಕ್ಕಾಗಿ ಗಡಿಯಲ್ಲಿ ಪ್ರಾಣದ ಹಂಗು ತೊರೆದು ಹೋರಾಡಿ ಹುತಾತ್ಮರಾದ ಬಿಎಸ್ಎಫ್ ಯೋಧ ನಿತಿನ್ ಸುಭಾಷ್ ಕೋಲಿ ಅವರಿಗೆ ಸೋಮವಾರ ಸಕಲ ಗೌರವಗಳೊಂದಿಗೆ ಭಾವಪೂರ್ಣ...

ಸಾಂಗ್ಲಿ: ದೇಶಕ್ಕಾಗಿ ಗಡಿಯಲ್ಲಿ ಪ್ರಾಣದ ಹಂಗು ತೊರೆದು ಹೋರಾಡಿ ಹುತಾತ್ಮರಾದ ಬಿಎಸ್ಎಫ್ ಯೋಧ ನಿತಿನ್ ಸುಭಾಷ್ ಕೋಲಿ ಅವರಿಗೆ ಸೋಮವಾರ ಸಕಲ ಗೌರವಗಳೊಂದಿಗೆ ಭಾವಪೂರ್ಣ ವಿದಾಯವನ್ನು ನೀಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಮಜ್ಲಿ ವಿಭಾಗದಲ್ಲಿ ಶುಕ್ರವಾರ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಭಾರತೀಯ ಸೇನೆ ನಡೆಸಿದ ಅಪ್ರಚೋದಿತ ಗುಂಡಿ ದಾಳಿಯಲ್ಲಿ ನಿತಿನ್ ಸುಭಾಷ್ ಕೋಲಿಯವರು ಗಂಭೀರವಾಗಿ ಗಾಯಗೊಂಡಿದ್ದರು. ಸೇನಾ ಆಸ್ಪತ್ರೆಯಲ್ಲಿ ಸುಭಾಷ್ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದರು.
ದೇಶದ ರಕ್ಷಣೆಗಾಗಿ ಹೋರಾಡಿ ಹುತಾತ್ಮರಾದ ಯೋಧ ನಿತಿನ್ ಕೋಲಿ ಅವರಿಗೆ ಸೆಲ್ಯೂಟ್ ಮಾಡುತ್ತಿದ್ದೇನೆ. ಸುಭಾಷ್ ಅವರ ಕುಟುಂಬದೊಂದಿಗೆ ನಾವಿದ್ದೇವೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
28ರ ಹರೆಯದ ಸುಭಾಷ್ ಕೋಲಿ ಯವರು ಸಾಂಗ್ಲಿಯ ದೂದ್ ಗಾಂವ್ ಮೂಲದವರಾಗಿದ್ದಾರೆ. ಸುಭಾಷ್ ಅವರಿಗೆ ವಿವಾಹಿತರಾಗಿದ್ದು, 4 ಮತ್ತು 2 ವರ್ಷದ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


