ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ: ಓರ್ವ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮನಾಗಿರುವ...

ಜಮ್ಮು: ಜಮ್ಮು ಮತ್ತು ಕಾಶ್ಮೀರ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮನಾಗಿರುವ ಘಟನೆ ಸೋಮವಾರ ನಡೆದಿದೆ.
2003ರ ನವೆಂಬರ್ ತಿಂಗಳಿನಲ್ಲಿ ಭಾರತ ಮತ್ತು ಪಾಕಿಸ್ತಾನ ರಾಷ್ಟ್ರಗಳ ಮಧ್ಯೆ ಕದನ ವಿರಾಮ ಒಪ್ಪಂದ ನಡೆದಿದೆ. ಆದರೆ, ಈ ಒಪ್ಪಂದವನ್ನು ಪಾಕಿಸ್ತಾನ ಸೈನಿಕರು ಪದೇಪದೇ ಉಲ್ಲಂಘನೆ ಮಾಡುತ್ತಿದೆ ಎಂದು ಪೊಲೀಸ್ ವಕ್ತಾರ ಹೇಳಿದ್ದಾರೆ.
ಆರ್.ಎಸ್.ಪುರ, ಸುಚೇತ್ಗರ್ಹ್ ಮತ್ತು ಹೀರಾನಗರ ಸೆಕ್ಟರ್ ಗಳಲ್ಲಿರುವ ನಾಗರೀಕ ಪ್ರದೇಶ ಹಾಗೂ ಸೇನಾ ಕೇಂದ್ರಗಳನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಸೇನೆ ಸ್ವಯಂ ಚಾಲಿತ ಗನ್ ಗಳು ಹಾಗೂ ಶೆಲ್ ಗಳ ದಾಳಿಯನ್ನು ನಡೆಸುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ನಿನ್ನೆ ಗಡಿಯಲ್ಲಿರುವ ಜನರು ದೀಪಾವಳಿಯನ್ನು ಆಚರಣೆ ಮಾಡತ್ತಿದ್ದ ವೇಳೆಯೂ ಗ್ರಾಮಗಳ ಮೇಲೆ ಪಾಕಿಸ್ತಾನ ಸೇನೆ ಶೆಲ್ ಗಳ ದಾಳಿ ನಡೆಸಿದೆ. ಗಡಿ ಉದ್ವಿಗ್ನ ವಾತಾವರಣ ಮುಂದುವರಿದಿರುವ ಹಿನ್ನೆಲೆಯಲ್ಲಿ ಗಡಿಯಲ್ಲಿರುವ ಶೈಕ್ಷಣಿಕ ಸಂಸ್ಥೆಗಳು, ಗ್ರಾಮೀನ ಅಭಿವೃದ್ಧಿ ಇಲಾಖೆಯ ಕಟ್ಟಡಗಳು, ಸಮುದಾಯ ಸಭಾಂಗಣಗಳು ಹಾಗೂ ಜಮ್ಮು, ಸಾಂಬಾ ಮತ್ತು ಕಥುವಾ ಜಿಲ್ಲೆಗಳ ನೂರಕ್ಕೂ ಹೆಚ್ಚು ಜನರನ್ನು ಅಧಿಕಾರಿಗಳು ಸ್ಥಳಾಂತರ ಮಾಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


