ಸಿಮಿ ಉಗ್ರರಿಗೆ ಸಹಾಯ ಮಾಡಿದವರ ವಿರುದ್ಧ ಕಠಿಣ ಕ್ರಮ: ಸಿಎಂ ಚೌಹಾಣ್
ಭೋಪಾಲ್ ಕೇಂದ್ರ ಜೈಲಿನಿಂದ ತಪ್ಪಿಸಿಕೊಂಡಿದ್ದ ಸಿಮಿ ಉಗ್ರರಿಗೆ ಯಾರೇ ಸಹಾಯ ಮಾಡಿದ್ದರೂ, ಯಾವುದೇ ವ್ಯಕ್ತಿಗಳು ಇದರಲ್ಲಿ ಭಾಗಿಯಾಗಿದ್ದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್...

ನವದೆಹಲಿ: ಭೋಪಾಲ್ ಕೇಂದ್ರ ಜೈಲಿನಿಂದ ತಪ್ಪಿಸಿಕೊಂಡಿದ್ದ ಸಿಮಿ ಉಗ್ರರಿಗೆ ಯಾರೇ ಸಹಾಯ ಮಾಡಿದ್ದರೂ, ಯಾವುದೇ ವ್ಯಕ್ತಿಗಳು ಇದರಲ್ಲಿ ಭಾಗಿಯಾಗಿದ್ದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸೋಮವಾರ ಹೇಳಿದ್ದಾರೆ.
ಸಿಮಿ ಉಗ್ರ ಎನ್ ಕೌಂಟರ್ ಪ್ರಕರಣ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಭೋಪಾಲ್ ಕೇಂದ್ರ ಜೈಲಿನಿಂದ ಪರಾರಿಯಾಗಿದ್ದ ಉಗ್ರರಿಗೆ ಯಾವುದೇ ವ್ಯಕ್ತಿಗಳು ಸಹಾಯ ಮಾಡಿದ್ದರೂ ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ, ಉಗ್ರರು ತಪ್ಪಿಸಿಕೊಂಡಿರುವುದು ಗಂಭೀರವಾದ ವಿಚಾರವಾಗಿದ್ದು, ಪ್ರಕರಣದಲ್ಲಿ ಭಾಗಿಯಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಉಗ್ರರನ್ನು ಪತ್ತೆ ಹಚ್ಚಲು ಪ್ರಮುಖ ಪಾತ್ರ ವಹಿಸಿದ ಸ್ಥಳೀಯರನ್ನು ಪ್ರಶಂಸಿಸಿದ್ದಾರೆ. ಅಲ್ಲದೆ, ಪ್ರತಿಪಕ್ಷಗಳ ಟೀಕೆಗಳ ವಿರುದ್ಧ ಕಿಡಿಕಾಡಿರುವ ಅವರು, ಪ್ರಕರಣದಲ್ಲಿ ರಾಜಕೀಯ ಮಾಡದಂತೆ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


