ದೇಶ

ಬದುಕಿ, ಬದುಕಲು ಬಿಡಿ: ಕರ್ನಾಟಕಕ್ಕೆ ಸುಪ್ರೀಂ ಸಲಹೆ

'ಬದುಕಿ ಮತ್ತು ಬದುಕಲು ಬಿಡಿ' ಎಂಬ ತತ್ವದ ಮೇಲೆ ನಂಬಿಕೆಯಿಡಿ. ಕಾವೇರಿ ನೀರನ್ನು ನೀವೂ ಬಳಸಿ, ತಮಿಳು ನಾಡಿಗೂ ಕೊಡಿ ಎಂದು ಶುಕ್ರವಾರ...

ಬದುಕಿ, ಬದುಕಲು ಬಿಡಿ: ಕರ್ನಾಟಕಕ್ಕೆ ಸುಪ್ರೀಂ ಸಲಹೆ
ಸುಪ್ರೀಂ ಕೋರ್ಟ್ (ಸಂಗ್ರಹ ಚಿತ್ರ)
Published On :

ನವದೆಹಲಿ: 'ಬದುಕಿ ಮತ್ತು ಬದುಕಲು ಬಿಡಿ' ಎಂಬ ತತ್ವದ ಮೇಲೆ ನಂಬಿಕೆಯಿಡಿ. ಕಾವೇರಿ ನೀರನ್ನು ನೀವೂ ಬಳಸಿ, ತಮಿಳು ನಾಡಿಗೂ ನೀಡಿ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಕರ್ನಾಟಕಕ್ಕೆ ಸಲಹೆ ನೀಡಿದೆ. ಅರ್ಜಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿ, ಎಷ್ಟು ನೀರನ್ನು ತಮಿಳು ನಾಡಿಗೆ ಬಿಡಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಬೇಕೆಂದು ಹೇಳಿದೆ.


ಸೋಮವಾರ ವಿವಾದದ ಬಗ್ಗೆ ವಿಸ್ತೃತ ಚರ್ಚೆ ನಡೆಸಿ ತೀರ್ಮಾನ ನೀಡಲಿದೆ.ನೀರಿನ ವಿವಾದದಲ್ಲಿ ಎರಡೂ ರಾಜ್ಯಗಳು ಪರಸ್ಪರ ಸಹಕಾರ ನೀಡಬೇಕು.ತಮಿಳು ನಾಡಿನಲ್ಲಿ ಬೆಳೆಗೆ ನೀರು ಕಡಿಮೆಯಾಗಿರುವಾಗ ಕರ್ನಾಟಕ ಬಿಡುಗಡೆ ಮಾಡಬೇಕು ಎಂದು ಕೋರ್ಟ್ ಹೇಳಿದೆ.

ತನ್ನ ಜಲಾಶಯದಿಂದ ಹೆಚ್ಚುವರಿ ಕಾವೇರಿ ನೀರನ್ನು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಬೇಕೆಂದು ತಮಿಳು ನಾಡು ಸರ್ಕಾರ ಸಲ್ಲಿಸಿದ್ದ ತುರ್ತು ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಈ ಸಲಹೆ ನೀಡಿದೆ.ತಮಿಳು ನಾಡಿನಲ್ಲಿ ಬೆಳೆದು ನಿಂತಿರುವ ಸಾಂಬಾ ಬೆಳೆಗೆ ನೀರುಣಿಸಲು ಕನಿಷ್ಠ 25 ಸಾವಿರ ದಶಲಕ್ಷ ಕ್ಯೂಬಿಕ್ ಅಡಿ ನೀರನ್ನು ಬಿಡುಗಡೆ ಮಾಡಲು ಕರ್ನಾಟಕಕ್ಕೆ ಆದೇಶ ನೀಡುವಂತೆ ಮಧ್ಯಂತರ ಆದೇಶ ತರಬೇಕೆಂದು ತಮಿಳು ನಾಡು ಅರ್ಜಿಯಲ್ಲಿ ಕೋರಿತ್ತು.ಆದರೆ ಜಲಾಶಯದಲ್ಲಿ ನೀರು ಕಡಿಮೆಯಿರುವುದರಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಸುಪ್ರೀಂ ಕೋರ್ಟ್ ಗೆ ಹೇಳಿತ್ತು.

ನ್ಯಾಯಾಧೀಕರಣದ ನಿರ್ಧಾರದ ಬಗ್ಗೆ ಚಿಂತಿಸುವುದಿಲ್ಲ ಎಂದು ನೀವು ಹೇಳಲು ಸಾಧ್ಯವಿಲ್ಲ, ನ್ಯಾಯಾಧೀಕರಣ ನೀರು ಹಂಚಿಕೆಯ ಸೂತ್ರ ನಿರ್ಧರಿಸಿದರೆ ಅದರಿಂದ ತಪ್ಪಿಸಿಕೊಳ್ಳಲು ಹೇಗೆ ಸಾಧ್ಯ ಎಂದು ಕರ್ನಾಟಕಕ್ಕೆ ನ್ಯಾಯಾಲಯ ಛೀಮಾರಿ ಹಾಕಿದೆ.ಇದೀಗ ಸುಪ್ರೀಂ ಕೋರ್ಟ್ ಸೋಮವಾರ ಏನು ತೀರ್ಪು ನೀಡುತ್ತದೆ ಎನ್ನುವುದು ಕುತೂಹಲ.ಇಂದು ಸುಪ್ರೀಂ ಕೋರ್ಟ್ ನೀಡಿರುವ ಸಲಹೆಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸುಪ್ರೀಂ ಕೋರ್ಟ್ ನೀಡಿರುವುದು ಅಂತಿಮ ತೀರ್ಪು ಅಲ್ಲ, ಬರೀ ಸಲಹಯಷ್ಟೆ. ಅಂತಿಮ ತೀರ್ಪಿಗೆ ಸರ್ಕಾರ ಕಾಯುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.