ಕೇರಳದ ಕಣ್ಣೂರಿನಲ್ಲಿ ಅವಳಿ ಬಾಂಬ್ ಸ್ಫೋಟ, ಇಬ್ಬರಿಗೆ ಗಂಭೀರ ಗಾಯ
ಕೇರಳದ ಕಣ್ಣೂರಿನಲ್ಲಿ ಶುಕ್ರವಾರ ಅವಳಿ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ 11 ವರ್ಷದ ಓರ್ವ ಬಾಲಕ ಗಂಭೀರವಾಗಿ...

Published On :
ಕಣ್ಣೂರ್: ಕೇರಳದ ಕಣ್ಣೂರಿನಲ್ಲಿ ಶುಕ್ರವಾರ ಅವಳಿ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ 11 ವರ್ಷದ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಕಣ್ಣೂರಿನ ಪನೂರ್ ಸಮೀಪದ ನೆಲ್ಲಂಕಲ್ ನಲ್ಲಿ ಚಂದ್ರ ಎಂಬುವವರ ಮನೆಯಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಆದರೆ ಮನೆಯ ಬಳಿಯೇ ಆಟವಾಡುತ್ತಿದ್ದ ಅವರ ಮಗ ದೇವಾನಂದ್ ಗಾಯಗೊಂಡಿದ್ದಾರೆ.
ಬಾಂಬ್ ಸ್ಫೋಟದಿಂದಾಗಿ ದೇವಾನಂದ್ ಅವರ ಕಣ್ಣಿಗೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಇಂದಿರಾ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಕೋಝಿಕೋಡ್ ಬೇಬಿ ಮೆಮೊರಿಯಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಇಂದು ಮಧ್ಯಾಹ್ನ ಕಣ್ಣೂರಿನ ಕಕ್ಕಯನಘಡ್ ಸಮೀಪದ ಪಲಪುಝಾದಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು, 34 ವರ್ಷದ ವ್ಯಕ್ತಿಯೊಬ್ಬ ಗಾಯಗೊಂಡಿದ್ದಾರೆ. ಗಾಯಾಳುವನ್ನು ಅಬ್ದುಲ್ ರಜಾಕ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮಧ್ಯೆ ನೆಲ್ಲಂಕಲ್ ಮನೆಯಲ್ಲಿ ಮತ್ತಷ್ಟು ಬಾಂಬ್ ಗಳಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


