ಭಾರತದಿಂದ ವಿಯೆಟ್ನಾಂ ಗೆ 500 ಮಿಲಿಯನ್ ಡಾಲರ್ ರಕ್ಷಣಾ ನೆರವು ಘೋಷಣೆ
ವಿಯೆಟ್ನಾಂನೊಂದಿಗೆ 12 ಒಪ್ಪಂದಗಳಿಗೆ ಸಹಿ ಹಾಕಿರುವ ಪ್ರಧಾನಿ ನರೇಂದ್ರ ಮೋದಿ ಆಗ್ನೇಯ ಏಷ್ಯಾ ರಾಷ್ಟ್ರಕ್ಕೆ ರಕ್ಷಣಾ ವಲಯದಲ್ಲಿ 500 ಮಿಲಿಯನ್ ಡಾಲರ್ ನೆರವು ಘೋಷಿಸಿದ್ದಾರೆ.

ಹನೋಯಿ: ವಿಯೆಟ್ನಾಂನೊಂದಿಗೆ 12 ಒಪ್ಪಂದಗಳಿಗೆ ಸಹಿ ಹಾಕಿರುವ ಪ್ರಧಾನಿ ನರೇಂದ್ರ ಮೋದಿ ಆಗ್ನೇಯ ಏಷ್ಯಾ ರಾಷ್ಟ್ರಕ್ಕೆ ರಕ್ಷಣಾ ವಲಯದಲ್ಲಿ 500 ಮಿಲಿಯನ್ ಡಾಲರ್ ನೆರವು ಘೋಷಿಸಿದ್ದಾರೆ.
ವಿಯೆಟ್ನಾಂ ನೊಂದಿಗೆ ರಕ್ಷಣಾ ಸಹಕಾರ ಒಪ್ಪಂದವನ್ನು ವೃದ್ಧಿಗೊಳಿಸುವುದಕ್ಕೆ ಸಹಕಾರಿಯಾಗುವ ಒಪ್ಪಂದ ಮಾಡಿಕೊಳ್ಳಲಾಗಿದ್ದು ಗಸ್ತು ದಳದ ದೋಣಿಗಳ ನಿರ್ಮಾಣಕ್ಕೆ ಸಂಬಂಧಿಸಿದ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಇನ್ನು ಉಭಯ ರಾಷ್ಟ್ರಗಳು ತಮ್ಮ ನಡುವಿನ ಸಂಬಂಧವನ್ನು ಕಾರ್ಯತಂತ್ರ ಪಾಲುದಾರಿಕೆಯಿಂದ ಸಮಗ್ರ ಕಾರ್ಯತಂತ್ರ ಪಾಲುದಾರಿಕೆಗೆ ನವೀಕರಣಗೊಳಿಸಿವೆ.
ದ್ವಿಪಕ್ಷೀಯ ಮಾತುಕತೆ ಬಳಿಕ ವಿಯೆಟ್ನಾಂ ಪ್ರಧಾನಿಯೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಉಭಯ ರಾಷ್ಟ್ರಗಳು ರಕ್ಷಣಾ ವಲಯದಲ್ಲಿ ಸಹಕಾರವನ್ನು ವೃದ್ಧಿಗೊಳಿಸಲು, ಸಮಾನ ಉದ್ದೇಶವನ್ನು ಮುಂದುವರಿಸಲು ತೀರ್ಮಾನಿಸಿವೆ ಎಂದು ಹೇಳಿದ್ದಾರೆ.
ಕಡಲಕರೆಯಾಚೆಯ ಗಸ್ತು ದೋಣಿಗಳ ನಿರ್ಮಾಣ ಒಪ್ಪಂದದ ಭಾಗವಾಗಿದ್ದು, ರಕ್ಷಣಾ ವಲಯದಲ್ಲಿ ವಿಯೆಟ್ನಾಂ ಗೆ 500 ಮಿಲಿಯನ್ ಡಾಲರ್ ನಷ್ಟು ನೆರವು ಘೋಷಣೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ವಿಯೆಟ್ನಾಂ ವೇಗ ಆರ್ಥಿಕ ಅಭಿವೃದ್ಧಿ ಸಾಧಿಸುವ ರಾಷ್ಟ್ರಗಳಲ್ಲಿ ಒಂದಾಗಿದ್ದು, 1.25 ಬಿಲಿಯನ್ ಭಾರತೀಯರು ವಿಯೆಟ್ನಾಂ ನ ಅಭಿವೃದ್ಧಿ ಪಯಣದಲ್ಲಿ ಪಾಲುದಾರರಾಗಲು ಸಿದ್ಧರಿರುತ್ತಾರೆ ಎಂದು ಹೇಳಿದ್ದಾರೆ. ವಿಯೆಟ್ನಾಂ ನೊಂದಿಗೆ ಭಾರತದ ದ್ವಿಪಕ್ಷೀಯ ವ್ಯಾಪಾರ ಪ್ರಸ್ತುತ 7.8 ಬಿಲಿಯನ್ ಡಾಲರ್ ನಷ್ಟಿದ್ದು, 2020 ರ ವೆಳೆಗೆ 15 ಮಿಲಿಯನ್ ಡಾಲರ್ ನಷ್ಟಾಗುವ ಗುರಿ ಹೊಂದಲಾಗಿದೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


