ದೇಶ

ಪಂಜಾಬ್ ನಲ್ಲಿ ಗ್ರನೇಡ್ ಸ್ಫೋಟ, ಇಬ್ಬರು ಸಾವು, ನಾಲ್ವರಿಗೆ ಗಾಯ

ಪಂಜಾಬ್ ನ ಶಾಸ್ತ್ರಿ ನಗರದ ಗುಡಿಸಲೊಂದರಲ್ಲಿ ಗ್ರನೇಡ್ ಸ್ಫೋಟಗೊಂಡು ಓರ್ವ ಮಹಿಳೆ ಸೇರಿದಂತೆ ರದ್ದಿ ಸಂಗ್ರಹಿಸುವ ಇಬ್ಬರು...

ಪಂಜಾಬ್ ನಲ್ಲಿ ಗ್ರನೇಡ್ ಸ್ಫೋಟ, ಇಬ್ಬರು ಸಾವು, ನಾಲ್ವರಿಗೆ ಗಾಯ
ಸಾಂದರ್ಭಿಕ ಚಿತ್ರ
Published On :
ಹೋಶಿರ್ಪುರ: ಪಂಜಾಬ್ ನ ಶಾಸ್ತ್ರಿ ನಗರದ ಗುಡಿಸಲೊಂದರಲ್ಲಿ ಗ್ರನೇಡ್ ಸ್ಫೋಟಗೊಂಡು ಓರ್ವ ಮಹಿಳೆ ಸೇರಿದಂತೆ ರದ್ದಿ ಸಂಗ್ರಹಿಸುವ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಹಾಗೂ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಗಳು ಗ್ರನೇಡ್ ನ ಹಿತ್ತಾಳೆಯನ್ನು ತೆಗೆದುಹಾಕಲು ಯತ್ನಿಸುತ್ತಿದ್ದ ವೇಳೆ ಅದು ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟವರನ್ನು ಶಾಸ್ತ್ರಿನಗರದ ನಿವಾಸಿ ಫಕೀರಾ ಅವರ ಪತ್ನಿ ಮಾಮೋ(60) ಹಾಗೂ ಮೋಹಲ್ಲಾ ಕಮಲಾಪುರದ ನಿವಾಸಿ ಕಲ್ಲಿ ರಾಮ್ ಅವರ ಪುತ್ರ ಮೋಹನ್ ಲಾಲ್(20) ಎಂದು ಗುರುತಿಸಲಾಗಿದೆ. ಇನ್ನು ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 
ಹೋಶಿರ್ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲ್ವಂತ್ ಸಿಂಗ್ ಅವರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.