ದೇಶ

ಕೇರಳದಲ್ಲಿ ಮತ್ತೋರ್ವ ಬಿಜೆಪಿ ಕಾರ್ಯಕರ್ತನ ಹತ್ಯೆ

ಕೇರಳದಲ್ಲಿ ಮತ್ತೋರ್ವ ಬಿಜೆಪಿ ಕಾರ್ಯಕರ್ತನ ಹತ್ಯೆ ನಡೆದಿರುವುದರ ಬಗ್ಗೆ ವರದಿಯಾಗಿದೆ.

ಕೇರಳದಲ್ಲಿ ಮತ್ತೋರ್ವ ಬಿಜೆಪಿ ಕಾರ್ಯಕರ್ತನ ಹತ್ಯೆ
ಕೇರಳದಲ್ಲಿ ಮತ್ತೋರ್ವ ಬಿಜೆಪಿ ಕಾರಕರ್ತನ ಹತ್ಯೆ
Published On :
ಕಣ್ಣೂರು: ಕೇರಳದಲ್ಲಿ ಮತ್ತೋರ್ವ ಬಿಜೆಪಿ ಕಾರ್ಯಕರ್ತನ ಹತ್ಯೆ ನಡೆದಿರುವುದರ ಬಗ್ಗೆ ವರದಿಯಾಗಿದೆ. 
ಆಡಳಿತಾರೂಢ ಸಿಪಿಐ(ಎಂ) ಕಾರ್ಯಕರ್ತರು ಹಾಗು ಬಿಜೆಪಿ ಕಾರ್ಯಕರ್ತರ ನಡುವೆ ಕಣ್ಣೂರಿನಲ್ಲಿ ನಡೆದ ಘರ್ಷಣೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, 26 ವರ್ಷದ ಬಿನೀಶ್ ಎಂದು ತಿಳಿದುಬಂದಿದೆ. ತೀವ್ರವಾಗಿ ಗಾಯಗೊಂಡಿದ್ದ ಸ್ಥಿತಿಯಲ್ಲಿ ಪೊಲೀಸರು ಬಿನೀಶ್ ನ್ನು ಪತ್ತೆ ಮಾಡಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. 
ಕಳೆದ ಒಂದು ವಾರದಿಂದ ಕಣ್ಣೂರಿನಲ್ಲಿ ಬಿಜೆಪಿ- ಸಿಪಿಐ(ಎಂ) ಕಾರ್ಯಕರ್ತರ ನಡುವೆನ ಘರ್ಷಣೆಯಿಂದಾಗಿ ಆತಂಕಕಾರಿ ವಾತಾವರಣ ನಿರ್ಮಾಣವಾಗಿತ್ತು. ಸಿಪಿಐ ಕಾರ್ಯಕರ್ತರೊಬ್ಬರ ಕಾರಿನ ಮೇಲೆ ದಾಳಿ ನಡೆಸಿ ಕಾರ್ಯಕರ್ತ ಗಾಯಗೊಂಡ ಘಟನೆ ನಂತರ ಬಿಜೆಪಿ ಕಾರ್ಯಕರ್ತನ ಹತ್ಯೆ ನಡೆದಿದೆ ಎಂದು ಹೇಳಲಾಗುತ್ತಿದೆ. ಘಟನೆಯನ್ನು ಖಂಡಿಸಿರುವ ಬಿಜೆಪಿ ಕಣ್ಣೂರು ಜಿಲ್ಲೆ ಬಂದ್ ಗೆ ಕರೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.