ಚೀನಾದೊಂದಿಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಸಿಪಿಇಸಿ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರಧಾನಿ
ಜಿ-20 ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿಂಗ್ ಪಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಪಾಕಿಸ್ತಾನ- ಚೀನಾ ಎಕಾನಾಮಿಕ್ ಕಾರಿಡಾರ್ ಬಗ್ಗೆ...

Published On :
ಬೀಜಿಂಗ್: ಜಿ-20 ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿಂಗ್ ಪಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಪಾಕಿಸ್ತಾನ- ಚೀನಾ ಎಕಾನಾಮಿಕ್ ಕಾರಿಡಾರ್ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಾರ್ಯತಂತ್ರಗಳ ಆಸಕ್ತಿಗಳ ಬಗ್ಗೆ ಎರಡೂ ದೇಶಗಳು ಸೂಕ್ಷ್ಮವಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿಂಗ್ ಪಿಂಗ್ ಅವರಿಗೆ ಹೇಳಿದ್ದಾರೆ. ರಾಜಕೀಯ ಪರಿಸ್ಥಿತಿಗಳನ್ನು ಮಾತ್ರ ಆಧರಿಸಿ ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಮುಂದಾಗಬಾರದು, ದೀರ್ಘವಾಧಿಯ ದ್ವಿಪಕ್ಷೀಯ ಮಾತುಕತೆಗೆ ಉಭಯ ದೇಶಗಳು ಪರಸ್ಪರ ಆಕಾಂಕ್ಷೆಗಳನ್ನು, ಆತಂಕಗಳನ್ನು ಮತ್ತು ಕಾರ್ಯತಂತ್ರದ ಆಸಕ್ತಿಗಳನ್ನು ಗೌರವಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಉಭಯ ದೇಶಗಳು ಸಹ ಪರಸ್ಪರ ನಕಾರಾತ್ಮಕ ಗ್ರಹಿಕೆಯನ್ನು ತಡೆಯಬೇಕಾಗಿದೆ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ದ್ವಿಪಕ್ಷೀಯ ಮಾತುಕತೆ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ಇಲಾಖೆಯ ವಕ್ತಾರ ವಿಕಾಸ್ ಸ್ವರೂಪ್, ಭಯೋತ್ಪಾದನೆ ನಡೆಯುತ್ತಿರುವ ಪ್ರದೇಶದಲ್ಲಿ ಚೀನಾ-ಪಾಕಿಸ್ತಾನ ಎಕಾನಾಮಿಕ್ ಕಾರಿಡಾರ್ ನಿರ್ಮಾಣವಾಗುತ್ತಿರುವುದರ ಬಗ್ಗೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


