ನಿಗಮ -ಮಂಡಳಿ ಅಧ್ಯಕ್ಷರ ಪಟ್ಟಿ ತಿರಸ್ಕರಿಸಿದ ರಾಹುಲ್ ಗಾಂಧಿ
ನಿಗಮ, ಮಂಡಳಿಗಳ ಅಧ್ಯಕ್ಷರ ನೇಮಕಾತಿಯಲ್ಲಿ ಯುವಕರಿಗೆ ಪ್ರಾತಿನಿಧ್ಯತೆ ನೀಡಬೇಕು ಎಂದು ಹೇಳಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನಿರ್ದಿಷ್ಟ ಮಾನದಂಡ ...

ನವದೆಹಲಿ: ನಿಗಮ, ಮಂಡಳಿಗಳ ಅಧ್ಯಕ್ಷರ ನೇಮಕಾತಿಯಲ್ಲಿ ಯುವಕರಿಗೆ ಪ್ರಾತಿನಿಧ್ಯತೆ ನೀಡಬೇಕು ಎಂದು ಹೇಳಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನಿರ್ದಿಷ್ಟ ಮಾನದಂಡ ಅನುಸರಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ನಿಗಮ, ಮಂಡಳಿ ನೇಮಕದ ಸಂಭವನೀಯ ಪಟ್ಟಿಯೊಂದಿಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದರಾದರೂ, ಒಪ್ಪಿಗೆ ದೊರೆಯದೇ ಮರಳಿದರು. ಹೀಗಾಗಿ ನೇಮಕ ಪ್ರಕ್ರಿಯೆ ಮತ್ತೆ ಮುಂದಕ್ಕೆ ಹೋಗಿದೆ.
ಸಚಿವ ಸ್ಥಾನ ದೊರೆಯದೆ ನಿರಾಸೆಗೆ ಒಳಗಾಗಿರುವ 25ಕ್ಕೂ ಅಧಿಕ ಶಾಸಕರನ್ನೂ, ಸಿದ್ದರಾಮಯ್ಯ ಅವರೊಂದಿಗೆ ಪಕ್ಷ ಸೇರಿರುವ 25ಕ್ಕೂ ಅಧಿಕ ಮುಖಂಡರನ್ನೂ ಪಟ್ಟಿಯಲ್ಲಿ ಸೇರ್ಪಡೆ ಮಾಡಿದ್ದರಿಂದಲೇ ಹೈಕಮಾಂಡ್ ಒಪ್ಪಿಗೆ ನೀಡಿಲ್ಲ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ. ಸೆಪ್ಟಂಬರ್ 24 ರ ನಂತರ ಮತ್ತೊಂದು ಪಟ್ಟಿ ಸಿದ್ಧ ಮಾಡಿಕೊಂಡು ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ ತೆರಳಲಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


