ಕಾಶ್ಮೀರ ಹಿಂದೆ, ಇಂದು, ಮುಂದೆಂದೂ ಭಾರತದ ಅವಿಭಾಜ್ಯ ಅಂಗ: ರಾಜನಾಥ್ ಸಿಂಗ್
ನಮ್ಮ ದೇಶದ ಪ್ರತಿಯೊಬ್ಬ ನಾಗರಿಕರೂ ಕಾಶ್ಮೀರದ ಪರಿಸ್ಥಿತಿ ಸುಧಾರಣೆಗೊಳ್ಳಲು ಬಯಸುತ್ತಾರೆ.ಜಮ್ಮು-ಕಾಶ್ಮೀರ ಹಿಂದೆ, ಇಂದು...

Published On :
ಶ್ರೀನಗರ: ನಮ್ಮ ದೇಶದ ಪ್ರತಿಯೊಬ್ಬ ನಾಗರಿಕರೂ ಕಾಶ್ಮೀರದ ಪರಿಸ್ಥಿತಿ ಸುಧಾರಣೆಗೊಳ್ಳಲು ಬಯಸುತ್ತಾರೆ.ಜಮ್ಮು-ಕಾಶ್ಮೀರ ಹಿಂದೆ, ಇಂದು, ಮುಂದೆಂದೂ ಭಾರತದ ಅವಿಭಾಜ್ಯ ಅಂಗ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಪ್ರತಿಪಾದಿಸಿದ್ದಾರೆ.
ಅವರು ಇಂದು ಶ್ರೀನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಜಮ್ಮು-ಕಾಶ್ಮೀರದ ಪರಿಸ್ಥಿತಿ ಬಗ್ಗೆ ಸರ್ಕಾರಕ್ಕೆ ಕಾಳಜಿಯಿದೆ. ಕಾಶ್ಮೀರದ ಪರಿಸ್ಥಿತಿ ಸುಧಾರಣೆಯಾಗಬೇಕು ಎಂಬ ಅಭಿಪ್ರಾಯ ನಮಗಿದೆ ಎಂದು ಹೇಳಿದರು.ಕಾಶ್ಮೀರದ ಪ್ರತ್ಯೇಕತಾವಾದಿಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನಾವು ಕಾಶ್ಮೀರಿಗಳು ಅಥವಾ ಮಾನವೀಯರು ಎಂಬುದನ್ನು ನಂಬುವುದಿಲ್ಲ ಎಂದರು.
''ಯಾರಾದರೂ ಮಾತುಕತೆಗೆ ಹೋದರೆ ಪ್ರತ್ಯೇಕತಾವಾದಿಗಳು ನಿರಾಕರಿಸಿದರೆ ಅವರು ಕಾಶ್ಮೀರಿಗಳನ್ನು, ಮಾನವೀಯತೆಯನ್ನು ನಂಬುವುದಿಲ್ಲವೆಂದೇ ಅರ್ಥ. ಸರ್ವಪಕ್ಷ ನಿಯೋಗದ ಕೆಲ ಸದಸ್ಯರು ಹುರ್ರಿಯತ್ ಮುಖಂಡರನ್ನು ಭೇಟಿ ಮಾಡಲು ಹೋಗಿದ್ದರು, ಸರ್ಕಾರ ಒಪ್ಪಿಗೆ ನೀಡಿದೆಯೇ ಎಂದು ಕೇಳಿದ್ದಕ್ಕೆ ಒಪ್ಪಿಕೊಳ್ಳಲೂ ಇಲ್ಲ, ನಿರಾಕರಿಸಲೂ ಇಲ್ಲ ಎಂದು ಹೇಳಿದರು.
ಕಾಶ್ಮೀರದಲ್ಲಿ ಶಾಂತಿ ಯಾರ್ಯಾರು ಬಯಸುತ್ತಾರೆ ಅವರೊಂದಿಗೆ ಮಾತುಕತೆಗೆ ನಾವು ಸದಾ ಸಿದ್ಧ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಒಗ್ಗೂಡಿ ಕೆಲಸ ಮಾಡಲಿದೆ.
ಕಾಶ್ಮೀರದ ಸಮಸ್ಯೆಗೆ ಪರಿಹಾರ ಹುಡುಕಲು ಪ್ರತ್ಯೇಕತಾವಾದಿಗಳೊಂದಿಗೆ ಮಾತುಕತೆ ನಡೆಸಲು 30 ಸದಸ್ಯರೊಂದಿಗೆ ಗೃಹ ಸಚಿವ ರಾಜನಾಥ್ ಸಿಂಗ್ ನಿನ್ನೆ ಶ್ರೀನಗರಕ್ಕೆ ಆಗಮಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


