ಕಾಶ್ಮೀರ ಹಿಂಸಾಚಾರ: ಸರ್ವಪಕ್ಷ ಸಭೆ ಕುರಿತು ಮೋದಿಗೆ ವರದಿ ಸಲ್ಲಿಸಲಿರುವ ರಾಜನಾಥ ಸಿಂಗ್
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಸಲಾದ ಸರ್ವಪಕ್ಷ ಸಭೆ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಮಂಗಳವಾರ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಸಲಾದ ಸರ್ವಪಕ್ಷ ಸಭೆ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಮಂಗಳವಾರ ವರದಿ ಸಲ್ಲಿಸಲಾಗಿದ್ದಾರೆಂದು ತಿಳಿದುಬಂದಿದೆ.
ಉಗ್ರ ಬುರ್ಹಾನಿ ವಾನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ 50 ಕ್ಕೂ ಹೆಚ್ಚು ದಿನಗಳ ಕಾಲ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಭಾನುವಾರ ಕಾಶ್ಮೀರದಲ್ಲಿ ಸರ್ವಪಕ್ಷ ಸಭೆಯನ್ನು ನಡೆಸಲಾಗಿತ್ತು. 2 ದಿನಗಳ ಕಾಲ ರಾಜನಾಥ್ ಸಿಂಗ್ ಅವರು ಕಾಶ್ಮೀರಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದರು. ಇದರಂತೆ ನಿನ್ನೆ ಸಂಜೆ ದೆಹಲಿಗೆ ಬಂದಿಳಿದಿದ್ದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೂಡ ವಿಯೆಟ್ನಾಂ ಹಾಗೂ ಚೀನಾ ಭೇಟಿ ಬಳಿಕ ನಿನ್ನೆ ರಾತ್ರಿಯಷ್ಟೇ ದೆಹಲಿಗೆ ಬಂದಿಳಿರುವ ಹಿನ್ನೆಲೆಯಲ್ಲಿ ರಾಜನಾಥ್ ಸಿಂಗ್ ಅವರು ಇಂದು ಸರ್ವಪಕ್ಷ ಸಭೆ ಕುರಿತಂತೆ ಮೋದಿಯವರಿಗೆ ವರದಿ ನೀಡಲಿದ್ದಾರೆಂದು ಹೇಳಲಾಗುತ್ತಿದೆ.
ಗೃಹ ಸಚಿವ ರಾಜನಾಥ್ ಸಿಂಗ್ ಅವರು 2 ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿರುವ ಹಿನ್ನೆಲೆಯಲ್ಲಿ ಪಕ್ಷವು ಸಭೆ ನಡೆಸಲು ತೀರ್ಮಾನಿಸಿದ್ದು, ಪಕ್ಷದ ಸದಸ್ಯರೊಂದಿಗೆ ನಾಳೆ ಮಾತುಕತೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸಭೆ ವೇಳೆ ಮುಂದಿನ ಬೆಳವಣಿಗೆ ಹಾಗೂ ಯೋಜನೆಗಳ ಕುರಿತಂತೆ ನಾಯಕರು ಚರ್ಚೆ ನಡೆಸಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


