ದೇಶ

ರಾಷ್ಟ್ರೀಯ ಹಿತಾಸಕ್ತಿಗೆ ಪೂರಕವಾಗಿ ಕಾಶ್ಮೀರದ ಬಗ್ಗೆ ನಿರ್ಧಾರ: ಸಚಿವ ಕಿರಣ್ ರಿಜಿಜು

ಕಾಶ್ಮೀರ ಪ್ರತ್ಯೇಕತಾವಾದಿಗಳ ವಿರುದ್ಧ ಕ್ರಮ ಕೈಗೊಳ್ಳುವುದೂ ಸೇರಿದಂತೆ ಕಾಶ್ಮೀರದ ವಿಷಯದಲ್ಲಿ ಕೈಗೊಳ್ಳುವ ಎಲ್ಲಾ ನಿರ್ಧಾರಗಳು ರಾಷ್ಟ್ರೀಯ ಹಿತಾಸಕ್ತಿಯನ್ನು ಒಳಗೊಂಡಿರುತ್ತದೆ...

ರಾಷ್ಟ್ರೀಯ ಹಿತಾಸಕ್ತಿಗೆ ಪೂರಕವಾಗಿ ಕಾಶ್ಮೀರದ ಬಗ್ಗೆ ನಿರ್ಧಾರ: ಸಚಿವ ಕಿರಣ್ ರಿಜಿಜು
ಸಚಿವ ಕಿರಣ್ ರಿಜಿಜು
Published On :

ನವದೆಹಲಿ: ಕಾಶ್ಮೀರ ಪ್ರತ್ಯೇಕತಾವಾದಿಗಳ ವಿರುದ್ಧ ಕ್ರಮ ಕೈಗೊಳ್ಳುವುದೂ ಸೇರಿದಂತೆ ಕಾಶ್ಮೀರದ ವಿಷಯದಲ್ಲಿ ಕೈಗೊಳ್ಳುವ ಎಲ್ಲಾ ನಿರ್ಧಾರಗಳು ರಾಷ್ಟ್ರೀಯ ಹಿತಾಸಕ್ತಿಯನ್ನು ಒಳಗೊಂಡಿರುತ್ತದೆ ಎಂದು ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ರಾಷ್ಟ್ರೀಯ ಭದ್ರತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಶ್ಮೀರಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಕಿರಣ್ ರಿಜಿಜು ಹೇಳಿದ್ದಾರೆ. ಇನ್ನು ಪ್ರತಿಪಕ್ಷಗಳ ಅಸಹಕಾರದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಇದನ್ನು ದೊಡ್ಡ ವಿಷಯವನ್ನಾಗಿ ಪರಿಗಣಿಸಬೇಕಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರ ರಾಷ್ಟ್ರೀಯ ಭದ್ರತೆ ಹಾಗೂ ಜಮ್ಮು-ಕಾಶ್ಮೀರದ ಜನರ ಅಭಿವೃದ್ಧಿಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕೆ ಪೂರಕವಾಗಿ ನಿರ್ಧಾರಗಳನ್ನು ಕೈಗೊಳ್ಳಲಿದೆ ಎಂದು ಕಿರಣ್ ರಿಜಿಜು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.