ದೇಶ

ಕಾಶ್ಮೀರಕ್ಕೆ ಸಂಬಂಧಿಸಿದವರೊಂದಿಗೆ ಮಾತುಕತೆ, ಭದ್ರತೆ ವಿಷಯದಲ್ಲಿ ರಾಜಿ ಇಲ್ಲ: ಸರ್ವಪಕ್ಷ ನಿಯೋಗ ಸಭೆ

ಕೇಂದ್ರ ಸರ್ಕಾರ ಹಾಗೂ ಜಮ್ಮು-ಕಾಶ್ಮೀರ ಸರ್ಕಾರಗಳು ಕಾಶ್ಮೀರಕ್ಕೆ ಸಂಬಂಧಿಸಿದವರೊಂದಿಗೆ ಮಾತುಕತೆ ನಡೆಸಲು ಕ್ರಮ ಕೈಗೊಳ್ಳಬೇಕು ಆದರೆ ರಾಷ್ಟ್ರೀಯ ಭದ್ರತೆಯೊಂದಿಗೆ ರಾಜಿ ಮಾಡಿಕೊಳ್ಳಬಾರದು

ಕಾಶ್ಮೀರಕ್ಕೆ ಸಂಬಂಧಿಸಿದವರೊಂದಿಗೆ ಮಾತುಕತೆ, ಭದ್ರತೆ ವಿಷಯದಲ್ಲಿ ರಾಜಿ ಇಲ್ಲ: ಸರ್ವಪಕ್ಷ ನಿಯೋಗ ಸಭೆ
ಕಾಶ್ಮೀರಕ್ಕೆ ಸಂಬಂಧಿಸಿದವರೊಂದಿಗೆ ಮಾತುಕತೆ, ಭದ್ರತೆ ವಿಷಯದಲ್ಲಿ ರಾಜಿ ಇಲ್ಲ: ಸರ್ವಪಕ್ಷ ನಿಯೋಗ ಸಭೆ
Published On :

ನವದೆಹಲಿ: ಕೇಂದ್ರ ಸರ್ಕಾರ ಹಾಗೂ ಜಮ್ಮು-ಕಾಶ್ಮೀರ ಸರ್ಕಾರಗಳು ಕಾಶ್ಮೀರಕ್ಕೆ ಸಂಬಂಧಿಸಿದವರೊಂದಿಗೆ ಮಾತುಕತೆ ನಡೆಸಲು ಕ್ರಮ ಕೈಗೊಳ್ಳಬೇಕು ಆದರೆ ರಾಷ್ಟ್ರೀಯ ಭದ್ರತೆಯೊಂದಿಗೆ ರಾಜಿ ಮಾಡಿಕೊಳ್ಳಬಾರದು ಎಂದು ಸರ್ವಪಕ್ಷ ನಿಯೋಗ ನಿರ್ಧರಿಸಿದೆ.

ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸರ್ವಪಕ್ಷ ಸದಸ್ಯ ನಿಯೋಗ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಸಿದ್ದು, ಕಾಶ್ಮೀರದಲ್ಲಿ ಸದಸ್ಯರು ಸಾರ್ವಜನಿಕರು ಹಾಗೂ ವಿವಿಧ ರಾಜಕೀಯ ಪಕ್ಷ, ಸಂಘಟನೆಗಳೊಂದಿಗೆ ನಡೆಸಿದ ಚರ್ಚೆಯ ಫಲಿತಾಂಶದ ಬಗ್ಗೆ ಚರ್ಚೆ ನಡೆಸಿದ್ದಾರೆ.

ಸಭೆಯಲ್ಲಿ ಕಾಶ್ಮೀರಕ್ಕೆ ಸಂಬಂಧಿಸಿದ ಪ್ರತಿಯೊಂದು ಸಂಘಟನೆ, ರಾಜಕೀಯ ಪಕ್ಷಗಳೊಂದಿಗೂ ಮಾತುಕತೆ ನಡೆಸಲು ಕೇಂದ್ರ ಸರ್ಕಾರ, ಕಾಶ್ಮೀರ ಸರ್ಕಾರ ಕ್ರಮ ಕೈಗೊಳ್ಳಬೇಕು, ಆದರೆ ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ರಾಜಿ ಮಾಡಿಕೊಳ್ಳಬಾರದು ಎಂಬ ನಿರ್ಧಾರ ಕೈಗೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.