ಕಾಶ್ಮೀರ ಹಿಂಸಾಚಾರ: ರಾಷ್ಟ್ರಪತಿ ಭೇಟಿಯಾಗಲಿರುವ ರಾಜನಾಥ ಸಿಂಗ್
ಕಾಶ್ಮೀರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿಯಾಗಲಿದ್ದಾರೆಂದು...

ನವದೆಹಲಿ: ಕಾಶ್ಮೀರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿಯಾಗಲಿದ್ದಾರೆಂದು ತಿಳಿದುಬಂದಿದೆ.
ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಕಳೆದ 50ಕ್ಕೂ ಹೆಚ್ಚು ದಿನಗಳಿಂದಲೂ ಕಾಶ್ಮೀರದಲ್ಲಿ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಇಂದು ದೆಹಲಿಯಲ್ಲಿ ಗೃಹ ಸಚಿವರ ನೇತೃತ್ವದಲ್ಲಿ ಸರ್ವ ಪಕ್ಷ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜನಾಥ ಸಿಂಗ್ ಅವರು ರಾಷ್ಟ್ರಪತಿಯವರನ್ನು ಭೇಟಿ ಮಾಡಲಿದ್ದಾರೆಂದು ಹೇಳಲಾಗುತ್ತಿದೆ.
ಇಂದು ಸಂಜೆ 6 ಗಂಟೆ ಸುಮಾರಿಗೆ ಪ್ರಣಬ್ ಮುಖರ್ಜಿಯವರನ್ನು ಭೇಟಿಯಾಗಲಿರುವ ರಾಜನಾಥ್ ಸಿಂಗ್ ಅವರು ಕಾಶ್ಮೀರ ವಿವಾದ ಕುರಿತಂತೆ ಮಾತುಕತೆ ನಡೆಸಲಿದ್ದಾರೆ.
ಕಾಶ್ಮೀರ ವಿವಾದ ಕುರಿತಂತೆ ಕೆಲ ದಿನಗಳ ಹಿಂದಷ್ಟೇ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಕಾಶ್ಮೀರದಲ್ಲಿ ಸರ್ವಪಕ್ಷ ಸಭೆಯೊಂದು ನಡೆದಿತ್ತು. ಎರಡು ದಿನಗಳ ಕಾಲ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಗೃಹ ಸಚಿವರು ಪರಿಸ್ಥಿತಿಯನ್ನು ಅವಲೋಕಿಸಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ವಿಯೆಟ್ನಾಂ ಹಾಗೂ ಚೀನಾ ಪ್ರವಾಸ ಮುಗಿಸಿ ಸೋಮವಾರ ಸಂಜೆಯಷ್ಟೇ ದೆಹಲಿಗೆ ಬಂದಿದ್ದರು. ಇದರಂತೆ ನಿನ್ನೆ ರಾಜನಾಥ್ ಸಿಂಗ್ ಅವರು ಕಾಶ್ಮೀರ ಪರಿಸ್ಥಿತಿ ಕುರಿತಂತೆ ಪ್ರಧಾನಿಯವರಿಗೆ ವರದಿ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


