ದೇಶ

ಸುಷ್ಮಾ ಸ್ವರಾಜ್ ಇಟಾಲಿ ಭೇಟಿಯಲ್ಲಿ ನಾವಿಕರ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡಿಲ್ಲ: ವಿದೇಶಾಂಗ ಇಲಾಖೆ

ಭಾರತೀಯ ಮೀನುಗಾರರಿಬ್ಬರನ್ನು ಹತ್ಯೆಗೈದ ಇಟಲಿ ನಾವಿಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಲಾಗಿಲ್ಲ ಎಂದು ತಿಳಿದುಬಂದಿದೆ.

ಸುಷ್ಮಾ ಸ್ವರಾಜ್ ಇಟಾಲಿ ಭೇಟಿಯಲ್ಲಿ ನಾವಿಕರ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡಿಲ್ಲ: ವಿದೇಶಾಂಗ ಇಲಾಖೆ
ಸುಷ್ಮಾ ಸ್ವರಾಜ್
Published On :

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಇಟಾಲಿ ಭೇಟಿಯಲ್ಲಿ ಭಾರತೀಯ ಮೀನುಗಾರರಿಬ್ಬರನ್ನು ಹತ್ಯೆಗೈದ ಇಟಲಿ ನಾವಿಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಲಾಗಿಲ್ಲ ಎಂದು ತಿಳಿದುಬಂದಿದೆ.

ಕಳೆದ ವಾರ ಸುಷ್ಮಾ ಸ್ವರಾಜ್ ರೋಮ್ ಗೆ ಭೇಟಿ ನೀಡಿದ್ದ ವೇಳೆಯಲ್ಲಿ, ಯಾವುದೇ ಪ್ರಶ್ನೆಗಳನ್ನು ಕೇಳಲಾಗಿಲ್ಲ ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ. ಭಾರತೀಯ ಮೀನುಗಾರರಿಬ್ಬರ ಹತ್ಯೆ ಪ್ರಕರಣದ ಬಳಿಕ ಕಳೆದ ಕೆಲವು ವರ್ಷಗಳಿಂದ ಇಟಾಲಿ- ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿದೆ.

ಭಾರತೀಯ ಮೀನುಗಾರರನ್ನು ಹತ್ಯೆ ಮಾಡಿರುವ ಆರೋಪ ಎದುರಿಸುತ್ತಿರುವ ಇಟಾಲಿ ಮೀನುಗಾರರು ಸುಪ್ರೀಂ ಕೋರ್ಟ್ ನಿಂದ ಅನುಮತಿ ಪಡೆದು ಇಟಾಲಿಯಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.