ದೇಶ

ಕೇಜ್ರಿವಾಲ್ ಗೆ ಹಿನ್ನಡೆ, ಆಪ್ ಸರ್ಕಾರದ 21 ಸಂಸದೀಯ ಕಾರ್ಯದರ್ಶಿಗಳ ನೇಮಕ ಆದೇಶ ವಜಾ

ಆಮ್ ಆದ್ಮಿ ಪಕ್ಷದ 21 ಶಾಸಕರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ಮಾಡಿದ್ದ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ಆದೇಶವನ್ನು....

ಕೇಜ್ರಿವಾಲ್ ಗೆ ಹಿನ್ನಡೆ, ಆಪ್ ಸರ್ಕಾರದ 21 ಸಂಸದೀಯ ಕಾರ್ಯದರ್ಶಿಗಳ ನೇಮಕ ಆದೇಶ ವಜಾ
ಅರವಿಂದ್ ಕೇಜ್ರಿವಾಲ್
Published On :

ನವದೆಹಲಿ: ಆಮ್ ಆದ್ಮಿ ಪಕ್ಷದ 21 ಶಾಸಕರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ಮಾಡಿದ್ದ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ಆದೇಶವನ್ನು ದೆಹಲಿ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಜಿ ರೋಹಿನಿ ಮತ್ತು ನ್ಯಾಯಮೂರ್ತಿ ಸಂಗೀತಾ ಧಿಂಗ್ರಾ ಸೆಹಗಲ್ ನೇತೃತ್ವದ ಪೀಠ,ಅರವಿಂದ್ ಕೇಜ್ರಿವಾಲ್ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರ ಅಭಿಪ್ರಾಯ ಪಡೆಯದೆ ಅಥವಾ ಅವರೊಂದಿಗೆ ಚರ್ಚಿಸದೆ 21 ಶಾಸಕರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿದ್ದ ಆದೇಶವನ್ನು ವಜಾಗೊಳಿಸಿದೆ.

ಸರ್ಕಾರದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸುಂದಿ ನಂದ್ರಜೋಗ್ ಅವರು ಲೆಫ್ಟಿನೆಂಟ್ ಗವರ್ನರ್ ರೊಂದಿಗೆ ಚರ್ಚಿಸದೆ ಆಪ್ ಸರ್ಕಾರ ಹೊರಡಿಸಿದ್ದ ಹಲವು ಅಧಿಸೂಚನೆಗಳನ್ನು ರದ್ದುಗೊಳಿಸಿದ್ದ ಆಗಸ್ಟ್ 4ರ ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿದರು.

ಈ ತೀರ್ಪು ನಮ್ಮ(ದೆಹಲಿ ಸರ್ಕಾರ) ವಿರುದ್ಧವಾಗಿ ಬಂದಿದೆ ಎಂದು ನಾನು ಒಪ್ಪಿಕೊಳ್ಳುತ್ತೇನೆ ಎಂದು ನಂದ್ರಜೋಗ್ ಅವರು ತಿಳಿಸಿದ್ದಾರೆ.

ಕೋರ್ಟ್ ಗೆ ಆಡಳಿತಾತ್ಮಕ ಹುದ್ದೆಯ ಮುಖ್ಯಸ್ಥರ ಬಗ್ಗೆ ಸಂಪೂರ್ಣ ವಿವರ ನೀಡಿದ ಹೆಚ್ಚುವರಿ ಸೋಲಿಸಿಟರ್ ಜನರಲ್  ಸಂಜಯ್ ಜೈನ್ ಅವರು, ಚುನಾವಣಾ ಆಯೋಗ ಸಹ ಆಪ್ ಸರ್ಕಾರದ 21 ಸಂಸದೀಯ ಕಾರ್ಯದರ್ಶಿಗಳ ನೇಮಕಕ್ಕೆ ಸಂಬಂಧಿಸಿದ ವಿಷಯವನ್ನು ತಡೆ ಹಿಡಿದಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.