ದೇಶ

ಸಿಧು ಹೊಸ ಪಕ್ಷ ಉದಯ: ಕೇಜ್ರಿವಾಲ್ ವಿರುದ್ಧ ಮಾಜಿ ಕ್ರಿಕೆಟಿಗ ಬ್ಯಾಟಿಂಗ್

ಬಿಜೆಪಿ ತೊರೆದು ಆಮ್ ಆದ್ಮಿ ಪಕ್ಷ ಸೇರುವ ನಿರೀಕ್ಷೆಯಲ್ಲಿದ್ದ ಮಾಜಿ ಕ್ರಿಕೆಟಿಗ ಹಾಗೂ ಮಾಜಿ ಸಂಸದ ನವಜೋತ್ ಸಿಂಗ್ ಸಿಧು ಅವರು...

ಸಿಧು ಹೊಸ ಪಕ್ಷ ಉದಯ: ಕೇಜ್ರಿವಾಲ್ ವಿರುದ್ಧ ಮಾಜಿ ಕ್ರಿಕೆಟಿಗ ಬ್ಯಾಟಿಂಗ್
ಪತ್ರಿಕಾಗೋಷ್ಠಿಯಲ್ಲಿ ಸಿಧು
Published On :
ಚಂಡೀಗಢ: ಬಿಜೆಪಿ ತೊರೆದು ಆಮ್ ಆದ್ಮಿ ಪಕ್ಷ ಸೇರುವ ನಿರೀಕ್ಷೆಯಲ್ಲಿದ್ದ ಮಾಜಿ ಕ್ರಿಕೆಟಿಗ ಹಾಗೂ ಮಾಜಿ ಸಂಸದ ನವಜೋತ್ ಸಿಂಗ್ ಸಿಧು ಅವರು ಗುರುವಾರ ಆವಾಜ್ ಎ ಪಂಜಾಬ್ ಎಂಬ ನೂತನ ಪಕ್ಷವನ್ನು ಘೋಷಿಸಿದ್ದು, ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸಂಚಲನ ಮೂಡಿಸುವ ಸಾಧ್ಯತೆ ಇದೆ.
ಇಂದು ಸುದ್ದಿಗೋಷ್ಠಿಯಲ್ಲಿ ತಮ್ಮ ನೂತನ ಪಕ್ಷಕ್ಕೆ ಚಾಲನೆ ನೀಡಿ ಮಾತನಾಡಿದ ಸಿಧು, ಪಕ್ಷದ ಮೊದಲ ಸುದ್ದಿಗೋಷ್ಠಿಯಲ್ಲೇ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರಿಗೆ ಹೌದಪ್ಪಗಳು (ಹೇಳಿದಂತೆ ಕೇಳುವವರು) ಮಾತ್ರ ಬೇಕಾಗಿದ್ದಾರೆ ಎಂದು ಆರೋಪಿಸಿದ ಮಾಜಿ ಕ್ರಿಕೆಟಿಗ, ತಮ್ಮ ವೈಯಕ್ತಿಕ ಹಿತಕ್ಕಾಗಿ ಕೆಲವರು ರಾಜಕೀಯವನ್ನು ಮಾಡುವ ಮೂಲಕ ಪ್ರಜಾಪ್ರಭುತ್ವದ ಕತ್ತುಹಿಸುಕುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ಜಾಗೃತಿ ಮತ್ತು ಪಂಜಾಬ್ ಪುನಶ್ಚೇತನವೇ ಆವಾಜ್ ಎ ಪಂಜಾಬ್ ಪಕ್ಷದ ಗುರಿಯಾಗಿದೆ. ಜನರ ಸೇವೆ ಮಾಡುವ ನಿಟ್ಟಿನಲ್ಲಿ ನಾನು ರಾಜಕೀಯದಲ್ಲಿದ್ದೇನೆಯೇ ಹೊರತು, ವೈಯಕ್ತಿಕ ಲಾಭಕ್ಕಾಗಿ ಅಲ್ಲ. ನೂರು ಮಂದಿ ಕೆಟ್ಟವರಿಗಿಂತ ಒಬ್ಬ ಒಳ್ಳೆ ಮನುಷ್ಯ ಉತ್ತಮ ಎಂಬುದು ನಮ್ಮ ಪಕ್ಷದ ಘೋಷಣೆಯಾಗಿದೆ. ಆ ಮೂಲಕ ಪಂಜಾಬ್ ನಲ್ಲಿ ಗೆಲುವು ಸಾಧಿಸಲಿದೆ, ಪಂಜಾಬಿತನವೂ ಗೆಲ್ಲಲಿದೆ, ಪಂಜಾಬಿಗಳೂ ಗೆಲ್ಲಲಿದ್ದಾರೆ ಎಂದರು.
ದಶಕಗಳ ಕಾಲ ಭಾರತೀಯ ಜನತಾ ಪಕ್ಷದಲ್ಲಿದ್ದ ಸಿಧು, ಜುಲೈನಲ್ಲಿ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಆಪ್ ನಲ್ಲಿ ಡೀಲ್ ಮುರಿದು ಬಿದ್ದ ಪರಿಣಾಮ ಅಲ್ಲಿಂದ ದೂರ ಸರಿದಿದ್ದು, ತದ ನಂತರ ಕಾಂಗ್ರೆಸ್ ಬಾಗಿಲು ತಟ್ಟಿದ್ದರು. ಕೊನೆಗೆ ಹೊಸ ಪಕ್ಷ ರಚನೆ ಮಾಡುವುದಾಗಿ ಇತ್ತೀಚೆಗೆ ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.