ವಿಭಜಿತ ಆಂಧ್ರ ಪ್ರದೇಶಕ್ಕೆ ಕೇಂದ್ರದಿಂದ ವಿಶೇಷ ಪ್ಯಾಕೇಜ್ ಘೋಷಣೆ
ಪ್ರತ್ಯೇಕ ತೆಲಂಗಾಣ ರಾಜ್ಯ ವಿಭಜನೆ ಬಳಿಕ ಇದೇ ಮೊದಲ ಬಾರಿಗೆ ವಿಭಜಿತ ಆಂದ್ರ ಪ್ರದೇಶಕ್ಕೆ ಕೇಂದ್ರ ಸರ್ಕಾರ ಬುಧವಾರ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದೆ.

ನವದೆಹಲಿ: ಪ್ರತ್ಯೇಕ ತೆಲಂಗಾಣ ರಾಜ್ಯ ವಿಭಜನೆ ಬಳಿಕ ಇದೇ ಮೊದಲ ಬಾರಿಗೆ ವಿಭಜಿತ ಆಂದ್ರ ಪ್ರದೇಶಕ್ಕೆ ಕೇಂದ್ರ ಸರ್ಕಾರ ಬುಧವಾರ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದೆ.
ವಿವಿಧ ರೀತಿಯ ತೆರಿಗೆ ವಿನಾಯಿತಿ, ವಿಶೇಷ ಅನುದಾನ ಸೇರಿದಂತೆ ಆಂಧ್ರ ಪ್ರದೇಶ ಜನರ ದಶಕಗಳ ಕನಸಾದ ಪೋಲವರಂ ನೀರಾವರಿ ಯೋಜನೆಗೆ ಸಂಪೂರ್ಣ ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಇದಕ್ಕಾಗಿ ನೂತನ ಆರ್ಥಿಕ ಪ್ಯಾಕೇಜ್ ನಲ್ಲಿ ಕೆಲ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಆದರೆ ಆಂಧ್ರ ಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂಬ ಆಂಧ್ರ ಹೋರಾಟಗಾರರ ಮನವಿಯನ್ನು ಕೇಂದ್ರ ಪರೋಕ್ಷವಾಗಿ ತಿರಸ್ಕರಿಸಿದ್ದು, ವಿಶೇಷ ಸ್ಥಾನಮಾನ ಪ್ರಸ್ತಾಪವನ್ನು ತಿರಸ್ಕರಿಸಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು, ‘2014ರಲ್ಲಿ ರಾಜ್ಯ ವಿಭಜನೆಯಾದ ನಂತರ ಆಂಧ್ರ ಪ್ರದೇಶ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ರಾಜ್ಯವನ್ನು ಸಂಕಷ್ಟದಿಂದ ಪಾರು ಮಾಡಲು ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ’ ಎಂದು ಹೇಳಿದ್ದಾರೆ.
ಅಂತೆಯೇ ಪ್ರಸ್ತುತ ಆರ್ಥಿಕ ಪ್ಯಾಕೇಜ್ ನಲ್ಲಿ ಘೋಷಣೆ ಮಾಡಿರುವ ಪ್ರತಿಯೊಂದು ಭರವಸೆಗಳನ್ನು ಖಂಡಿತಾ ಈಡೇರಿಸುವುದಾಗಿ ಜೇಟ್ಲಿ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


