ದೇಶ

ಪಂಜಾಬ್ ನಲ್ಲಿ ಕೇಜ್ರಿವಾಲ್ ಕಾರು ಅಪಘಾತ: ಅಪಾಯದಿಂದ ಪಾರಾದ ದೆಹಲಿ ಸಿಎಂ

ಪಂಜಾಬ್ ಪ್ರವಾಸದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಕೇಜ್ರಿವಾಲ್ ಅಪಾಯದಿಂದ ಪಾರಾಗಿದ್ದಾರೆ.

ಪಂಜಾಬ್ ನಲ್ಲಿ ಕೇಜ್ರಿವಾಲ್ ಕಾರು ಅಪಘಾತ: ಅಪಾಯದಿಂದ ಪಾರಾದ ದೆಹಲಿ ಸಿಎಂ
ಪಂಜಾಬ್ ನಲ್ಲಿ ಕೇಜ್ರಿವಾಲ್ ಕಾರು ಅಪಘಾತ
Published On :

ಚಂಡೀಗಢ: ಪಂಜಾಬ್ ಪ್ರವಾಸದಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಕೇಜ್ರಿವಾಲ್ ಅಪಾಯದಿಂದ ಪಾರಾಗಿದ್ದಾರೆ.

ಕೇಜ್ರಿವಾಲ್ ಬಳಸುತ್ತಿದ್ದ ಟೊಯಾಟಾ ಇನೋವಾ(ಎಂಯುವಿ) ಕಾರು ಅಪಘಾತದಲ್ಲಿ ಹಾನಿಗೊಳಗಾಗಿದ್ದು, ಅಪಘಾತ ಸಂಮಭವಿಸುತ್ತಿದ್ದಂತೆಯೇ ಕೇಜ್ರಿವಾಲ್ ಅವರನ್ನು ಬೇರೆ ಕಾರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಅಮೃತ್ ಸರಕ್ಕೆ ತೆರಳುತ್ತಿದ್ದ ವೇಳೆ ಮಾರ್ಗಮಧ್ಯದಲ್ಲಿ ಅಪಘಾತ ಸಂಭವಿಸಿದ್ದು ಅವಘಡದಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ.

ಲೂದಿಯಾಣಾದಿಂದ ಅಮೃತಸರಕ್ಕೆ ತೆರಳುತ್ತಿದ್ದಾಗ ಮೇಲ್ಸೇತುವೆಯಿಂದ ಕೆಳಗೆ ಇಳಿಯುತ್ತಿದ್ದ ಇನೋವಾ ಕಾರು ತ್ರಿಚಕ್ರ ವಾಗಾನವೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ ಸಜ್ಜುಗೊಳ್ಳುತ್ತಿದ್ದು, ಚುನಾವಣೆಯ ಭಾಗವಾಗಿ ಆಮ್ ಆದ್ಮಿ ಪಕ್ಷದ ಮುಖಂಡ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪಂಜಾಬ್ ಪ್ರವಾಸ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.