ರಾಜೀವ್ ರೋಷನ್ ಹತ್ಯೆ: 11 ವರ್ಷಗಳ ಬಳಿಕ ಮಾಜಿ ಆರ್ ಜೆಡಿ ಸಂಸದ ಶಹಾಬುದ್ದೀನ್ ಬಿಡುಗಡೆ
ಹತ್ಯೆ ಆರೋಪದ ಮೇಲೆ ಕಳೆದ 11 ವರ್ಷಗಳಿಂದ ಜೈಲಿನಲ್ಲಿದ್ದ ಮಾಜಿ ಆರ್ ಜೆಡಿ ಸಂಸದ ಹಾಗೂ ಲಾಲೂ ಪ್ರಸಾದ್ ಯಾದವ್ ಅವರ ಆಪ್ತ ಶಹಾಬುದ್ದೀನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಪಾಟ್ನಾ: ಹನ್ನೊಂದು ವರ್ಷಗಳ ಹಿಂದೆ ಇಬ್ಬರು ಸಹೋದರರ ಮೇಲೆ ಆ್ಯಸಿಡ್ ದಾಳಿ ನಡೆಸಿ, ಹತ್ಯೆ ಮಾಡಿ ಬಳಿಕ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಬಿಜೆಪಿ ಮುಖಂಡ ರಾಜೀವ್ ರೋಷನ್ ಎಂಬುವವರನ್ನು ಹತ್ಯೆಗೈದ ಆರೋಪದ ಮೇಲೆ ಕಳೆದ 11 ವರ್ಷಗಳಿಂದ ಜೈಲಿನಲ್ಲಿದ್ದ ಮಾಜಿ ಆರ್ ಜೆಡಿ ಸಂಸದ ಹಾಗೂ ಲಾಲೂ ಪ್ರಸಾದ್ ಯಾದವ್ ಅವರ ಆಪ್ತ ಶಹಾಬುದ್ದೀನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಬಿಹಾರದ ಭಾಗಲ್ಪುರದಲ್ಲಿರುವ ಕೇಂದ್ರ ಕಾರಾಗೃಹದಿಂದ ಇಂದು ಬೆಳಗ್ಗೆ ಶಹಾಬುದ್ದೀನ್ ಬಿಡುಗಡೆಯಾಗಿದ್ದು, ರಾಜೀವ್ ರೋಷನ್ ಹತ್ಯೆ ಪ್ರಕರಣ ಸಂಬಂಧ ಕಳೆದ 11 ವರ್ಷಗಳಿಂದ ಜೈಲಿನಲ್ಲಿದ್ದು, ವಿಚಾರಣೆ ಎದುರಿಸುತ್ತಿದ್ದ ಅವರಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು. ಅದರಂತೆ ಇಂದು ಅವರು ಜೈಲಿನಿಂದ ಬಿಡುಗಡೆಯಾಗಿದ್ದು, ಅವರ ಆಪ್ತರಲ್ಲಿ ಸಂಭ್ರಮದ ವಾತಾವರಣ ನೆಲೆಸಿದೆ.
ಜೈಲಿನ ಹೊರಗೆ ಅವರ ಬರುವಿಕೆಗಾಗಿ ಕಾಯುತ್ತಿದ್ದ ಅವರ ಆಪ್ತರು ಜೈಲಿನಿಂದ ಹೊರಬರುತ್ತಿದ್ದಂತೆಯೇ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಅಲ್ಲದೆ ಅವರ ಹಾರ-ತುರಾಯಿಗಳನ್ನು ಹಾಕಿ ಸ್ವಾಗತ ಕೋರಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಂಸದ ಶಹಾಬುದ್ದೀನ್ ತಮ್ಮದಲ್ಲದ ತಪ್ಪಿಗೆ ನಾನು ಜೈಲು ಶಿಕ್ಷೆ ಅನುಭವಿಸುವಂತಾಗಿತ್ತು. ಆದರೆ ನ್ಯಾಯಾಲಯದ ವಿಚಾರಣೆ ಮೇಲೆ ತಮಗೆ ನಂಬಿಕೆ ಇದ್ದು ಖಂಡಿತಾ ನ್ಯಾಯ ದೊರೆಯಲಿದೆ ಎಂದು ಹೇಳಿದ್ದಾರೆ.
ಹನ್ನೊಂದು ವರ್ಷಗಳ ಹಿಂದೆ ಇಬ್ಬರು ಸಹೋದರರ ಮೇಲೆ ಆ್ಯಸಿಡ್ ದಾಳಿ ನಡೆಸಿ, ಹತ್ಯೆ ಮಾಡಿ ಬಳಿಕ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಬಿಜೆಪಿ ಮುಖಂಡ ರಾಜೀವ್ ರೋಷನ್ ಎಂಬುವವರನ್ನು ಹತ್ಯೆಗೈದ ಆರೋಪದ ಸಂಬಂಧ ಪ್ರಮುಖ ಆರೋಪಿಯಾಗಿದ್ದ ಬಿಹಾರದ ಮಾಜಿ ಸಂಸದ ಮೊಹಮ್ಮದ್ ಶಹಾಬುದ್ದೀನ್ ಮತ್ತು ಇತರೆ ಮೂವರು ಆರೋಪಿಗಳಿಗೆ ಬಿಹಾರದ ನ್ಯಾಯಾಲಯ 2015ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


