ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ನೀಡಲಾಗಿರುವ ಸೌಲಭ್ಯ ಕಡಿತದ ಪರವಾಗಿದ್ದೇನೆ: ಮನೋಹರ್ ಪರಿಕ್ಕರ್
ಪ್ರತ್ಯೇಕತಾವಾದಿಗಳಿಗೆ ನೀಡಲಾಗಿರುವ ಸೌಲಭ್ಯಗಳನ್ನು ಈ ಹಿಂದೆಯೇ ವಾಪಸ್ ಪಡೆಯಬೇಕಿತ್ತು ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.

ವಡೋದರಾ: ಕಾಶ್ಮೀರ ಪ್ರತ್ಯೇಕತಾವಾದಿಗಳಿಗೆ ನೀಡಲಾಗಿರುವ ಸೌಲಭ್ಯಗಳನ್ನು ವಾಪಸ್ ಪಡೆಯುವುದರ ಬಗ್ಗೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಪ್ರತಿಕ್ರಿಯೆ ನೀಡಿದ್ದು, ಪ್ರತ್ಯೇಕತಾವಾದಿಗಳಿಗೆ ನೀಡಲಾಗಿರುವ ಸೌಲಭ್ಯಗಳನ್ನು ಈ ಹಿಂದೆಯೇ ವಾಪಸ್ ಪಡೆಯಬೇಕಿತ್ತು ಎಂದು ಹೇಳಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ನೀಡಲಾಗಿರುವ ಸೌಲಭ್ಯಗಳನ್ನು ವಾಪಸ್ ಪಡೆಯುವುದರ ಪರವಾಗಿದೆ ಎಂಬ ಸೂಚನೆ ನೀಡಿದ್ದಾರೆ.
ವಡೋದರಾದಲ್ಲಿ ನಡೆದ ಎಫ್ ಜಿಐ ಎಕ್ಸಲೆನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮನೋಹರ್ ಪರಿಕ್ಕರ್, ಪಿಟಿಐ ಪತ್ರಕರ್ತರು ಕಾಶ್ಮೀರಿ ಪ್ರತ್ಯೇಕತಾವಾದಿಗಳು ಪಡೆಯುತ್ತಿರುವ ಸೌಲಭ್ಯಗಳನ್ನು ಮುಂದುವರೆಸಬೇಕೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು, ಪ್ರತ್ಯೇಕತಾವಾದಿಗಳು ಸರ್ಕಾರದಿಂದ ವಿಶೇಷ ಸೌಲಭ್ಯಗಳನ್ನು ಪಡೆಯುತ್ತಿರುವುದರ ಬಗ್ಗೆ ಆತಂಕವಿದೆ. ಅವರಿಗೆ ನೀಡಲಾಗಿರುವ ಸೌಲಭ್ಯಗಳನ್ನು ವಾಪಸ್ ಪಡೆಯುವುದರ ಪರವಾಗಿದ್ದೇನೆ ಎಂದು ಮನೋಹರ್ ಪರಿಕ್ಕರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ನೀಡಲಾಗಿರುವ ವಿಶೇಷ ಸೌಲಭ್ಯಗಳನ್ನು ವಾಪಸ್ ಪಡೆಯುತ್ತದೆ ಎಂಬ ವಿಚಾರದ ಬಗ್ಗೆ ವರದಿಗಳು ಪ್ರಕಟವಾದ ಬೆನ್ನಲ್ಲೇ ಮನೋಹರ್ ಪರಿಕ್ಕರ್ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


