ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್- ನೇಪಾಳ ವಿದೇಶಾಂಗ ಸಚಿವರ ಭೇಟಿ
ನೇಪಾಳ ವಿದೇಶಾಂಗ ಸಚಿವರು ಭಾರತಕ್ಕೆ ಭೇಟಿ ನೀಡಿದ್ದು, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿದ್ದಾರೆ.

ನವದೆಹಲಿ: ನೇಪಾಳದ ನೂತನ ಪ್ರಧಾನಿ ಪುಷ್ಪ್ ಕಮಲ್ ದಹಲ್ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಇದಕ್ಕೂ ಮುನ್ನ, ನೇಪಾಳ ವಿದೇಶಾಂಗ ಸಚಿವರು ಭಾರತಕ್ಕೆ ಭೇಟಿ ನೀಡಿದ್ದು, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿದ್ದಾರೆ.
ನೇಪಾಳದ ನೂತನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿರುವ ಪುಷ್ಪ್ ಕಮಲ್ ದಹಲ್ (ಪ್ರಚಂಡ) ಅವರು ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಸೆ.15 ರಂದು ನೇಪಾಳದ ಪ್ರಧಾನಿ ಭಾರತಕ್ಕೆ ಆಗಮಿಸಲಿದ್ದು, ಇದಕ್ಕೂ ಮುನ್ನ ನೇಪಾಳದ ವಿದೇಶಾಂಗ ಸಚಿವ ಪ್ರಕಾಶ್ ಶರಣ್ ಮಹಾತ್ ಭಾರತಕ್ಕೆ ಆಗಮಿಸಿದ್ದು ಸುಷ್ಮಾ ಸ್ವರಾಜ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಕಳೆದ ತಿಂಗಳು ಕೆಪಿ ಶರ್ಮಾ ಒಲಿ ಅವರನ್ನು ಪದಚ್ಯುತಗೊಳಿಸಿ ಪ್ರಚಂಡ ನೇಪಾಳದ ಪ್ರಧಾನಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


