ಹೊತ್ತಿ ಉರಿಯುತ್ತಿರುವ ಬೆಂಗಳೂರು: ರಾಜ್ಯದ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ
ತಮಿಳು ನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಆರಂಭಿಸಿದ್ದ ಪ್ರತಿಭಟನೆ...

Published On :
ನವದೆಹಲಿ: ತಮಿಳು ನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಆರಂಭಿಸಿದ್ದ ಪ್ರತಿಭಟನೆ ನಿನ್ನೆ(ಸೋಮವಾರ) ಹಿಂಸಾರೂಪಕ್ಕೆ ತಿರುಗಿತು. ಸುಪ್ರೀಂ ಕೋರ್ಟ್ ನ ಮಾರ್ಪಾಡು ಆದೇಶ ನಿನ್ನೆ ಹೊರಬಿದ್ದ ಮೇಲಂತೂ ಅದು ಇನ್ನೂ ಹೆಚ್ಚಾಯಿತು.
ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಕರ್ನಾಟಕ ಮತ್ತು ತಮಿಳು ನಾಡು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದ್ದಾರೆ.
ವಿಶೇಷ ಅರೆಸೈನಿಕ ಪಡೆಯ ಸಾವಿರ ಸಿಬ್ಬಂದಿಯನ್ನು ಪರಿಸ್ಥಿತಿ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕಳುಹಿಸಿದೆ. ಕರ್ನಾಟಕದ ಗಲಭೆಪೀಡಿತ ಪ್ರದೇಶಗಳಿಗೆ ಸಿಬ್ಬಂದಿಯನ್ನು ಕಳುಹಿಸಲಾಗಿದ್ದು, ಅಗತ್ಯಬಿದ್ದರೆ ತಮಿಳು ನಾಡಿಗೂ ಕೂಡ ಕೇಂದ್ರ ಮೀಸಲು ಪೊಲೀಸ್ ಪಡೆಯ ಪುರುಷ ಮತ್ತು ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಗಡಿ ಭದ್ರತಾ ಪಡೆಯ 5-10 ತುಕಡಿಗಳನ್ನು ಮತ್ತು ಭಾರತ-ಟಿಬೆಟನ್ ಗಡಿ ಪೊಲೀಸರನ್ನು ಹೆಚ್ಚುವರಿಯಾಗಿ ಇರಿಸಲಾಗಿದ್ದು, ಅಗತ್ಯಬಿದ್ದರೆ ಕಳುಹಿಸಿಕೊಡಲಾಗುವುದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


