ರಸ್ತೆಯಲ್ಲಿ ನಿಂತು ವಿವಾದ ಬಗೆಹರಿಸಲು ಸಾಧ್ಯವಿಲ್ಲ: ವೆಂಕಯ್ಯನಾಯ್ಡು
ಪ್ರತಿಭಟನೆ ಹೆಸರಲ್ಲಿ ಹಿಂಸಾಚಾರ ಸಹಿಸಲಾಗುವುದಿಲ್ಲ, ಹಿಂಸಾಚಾರದಿಂದ ಪರಿಹಾರ ಸಿಗುವುದಿಲ್ಲ, ಶಾಂತಿ ಕಾಪಾಡಿ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು .,.

ಬೆಂಗಳೂರು: ಪ್ರತಿಭಟನೆ ಹೆಸರಲ್ಲಿ ಹಿಂಸಾಚಾರ ಸಹಿಸಲಾಗುವುದಿಲ್ಲ, ಹಿಂಸಾಚಾರದಿಂದ ಪರಿಹಾರ ಸಿಗುವುದಿಲ್ಲ, ಶಾಂತಿ ಕಾಪಾಡಿ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಕರ್ನಾಟಕ ಹಾಗೂ ತಮಿಳು ನಾಡು ಜನರಿಗೆ ಮನವಿ ಮಾಡಿದ್ದಾರೆ..
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ವಿವಾದವನ್ನು ರಸ್ತೆಯಲ್ಲಿ ಬಗೆಹರಿಸಲು ಸಾಧ್ಯವಿಲ್ಲ. ಯಾರೂ ಜನರನ್ನು ಪ್ರಚೋದಿಸುವ ಕೆಲಸ ಮಾಡಬಾರದು ಎಂದು ಎಚ್ಚರಿಸಿದರು.ಕರ್ನಾಟಕ ಹಾಗೂ ತಮಿಳುನಾಡು ಜನರು ಶಾಂತಿ ಕಾಪಾಡುವಂತೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಮನವೊಲಿಸಬೇಕು ಎಂದು ಸಲಹೆ ನೀಡಿದರು.
ಹಿಂಸಾಚಾರದಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ, ಗಲಭೆ ಗಳನ್ನು ವೈಭವೀಕರಿಸದಂತೆ ಟಿವಿ ಮಾಧ್ಯಮಗಳಿಗೆ ಮನವಿ ಮಾಡಿದ ಅವರು, ಕಾವೇರಿ ವಿಚಾರದಲ್ಲಿ ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


