''ಕಾವೇರಿ ಗಲಭೆ ವೈಯಕ್ತಿಕವಾಗಿ ನನಗೆ ನೋವುಂಟುಮಾಡಿದೆ'': ನರೇಂದ್ರ ಮೋದಿ
ಕರ್ನಾಟಕ ಮತ್ತು ತಮಿಳು ನಾಡು ಮಧ್ಯೆ ನಡೆಯುತ್ತಿರುವ ಕಾವೇರಿ ಜಲ ವಿವಾದ ಮತ್ತು ಕರ್ನಾಟಕದಲ್ಲಿನ ಗಲಭೆ...

Published On :
ನವದೆಹಲಿ: ಕರ್ನಾಟಕ ಮತ್ತು ತಮಿಳು ನಾಡು ಮಧ್ಯೆ ನಡೆಯುತ್ತಿರುವ ಕಾವೇರಿ ಜಲ ವಿವಾದ ಮತ್ತು ಕರ್ನಾಟಕದಲ್ಲಿನ ಗಲಭೆ, ಹಿಂಸಾಚಾರದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೊನೆಗೂ ಹೇಳಿಕೆ ನೀಡಿದ್ದಾರೆ.
''ಕಾವೇರಿ ನೀರು ಬಿಡುಗಡೆ ವಿಚಾರವಾಗಿ ನಡೆಯುತ್ತಿರುವ ಬೆಳವಣಿಗೆಯಿಂದ ವೈಯಕ್ತಿಕವಾಗಿ ನನಗೆ ನೋವಾಗಿದೆ. ಹಿಂಸಾಚಾರದಿಂದ ಯಾವುದೇ ಸಮಸ್ಯೆಗೂ ಪರಿಹಾರ ಸಿಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ, ಸಂಯಮ ಮತ್ತು ಪರಸ್ಪರ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಬಹುದು. ಕಾನೂನಿನ ಚೌಕಟ್ಟಿನೊಳಗೆ ಮಾತುಕತೆ ಮೂಲಕ ಮಾತ್ರ ಈ ವಿವಾದವನ್ನು ಬಗೆಹರಿಸಿಕೊಳ್ಳಬಹುದಷ್ಟೆ. ಕಾನೂನನ್ನು ಮುರಿಯುವುದು ಅದಕ್ಕೆ ಪರ್ಯಾಯ ಮಾರ್ಗವಲ್ಲ. ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಹಿಂಸಾಚಾರ, ಗಲಭೆಗಳಿಂದ ಬಡಜನತೆಗೆ ನಷ್ಟ, ತೊಂದರೆಯುಂಟಾಗುತ್ತಿದ್ದು, ದೇಶದ ಆಸ್ತಿ-ಪಾಸ್ತಿಗೆ ಹಾನಿಯಾಗುತ್ತಿದೆ ಎಂದು ಅವರು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಮ್ಮ ದೇಶ ಯಾವಾಗೆಲ್ಲಾ ಅಡ್ಡ ಪರಿಣಾಮ ಎದುರಿಸಿತ್ತೋ ಆಗೆಲ್ಲ ಕರ್ನಾಟಕ ಮತ್ತು ತಮಿಳು ನಾಡಿನ ಜನರು ದೇಶದ ಉಳಿದ ಭಾಗಗಳಂತೆ ಪರಿಸ್ಥಿತಿಯನ್ನು ತುಂಬ ಸೂಕ್ಷ್ಮವಾಗಿ ನಿಭಾಯಿಸಿದ್ದಾರೆ. ಈ ಸಂದರ್ಭದಲ್ಲಿ ನಾನು ಎರಡೂ ರಾಜ್ಯಗಳ ಜನತೆಯನ್ನು ಮನವಿ ಮಾಡಿಕೊಳ್ಳುತ್ತೇನೆ, ಜನರು ತಮ್ಮ ನಾಗರಿಕ ಜವಾಬ್ದಾರಿಗಳನ್ನು ಅರಿತು ಬಹಳ ಸೂಕ್ಷ್ಮವಾಗಿ ನಡೆದುಕೊಳ್ಳಬೇಕೆಂದು ಕೋರುತ್ತೇನೆ ಎಂದು ಪ್ರಧಾನಿ ಕೋರಿದ್ದಾರೆ.
''ನೀವೆಲ್ಲರೂ ರಾಷ್ಟ್ರದ ವಿಷಯ ಬಂದಾಗ ಎಲ್ಲಕ್ಕಿಂತ ಮುಖ್ಯವಾಗಿ ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವ್ಯವಹರಿಸುತ್ತೀರಿ ಎಂದು ನಂಬುತ್ತೇನೆ. ಸೌಹಾರ್ದಯುತವಾಗಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು.'' ಎಂದು ಪ್ರಧಾನಿ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


