ರಾಜೀವ್ ಗಾಂಧಿ ಹಂತಕನ ಮೇಲೆ ಜೈಲಿನಲ್ಲೇ ಹಲ್ಲೆ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಎ.ಜಿ.ಪೆರಾರಿವಲನ್ ಮೇಲೆ ಸಹ ಕೈದಿಯೊಬ್ಬ ದಾಳಿ ಮಾಡಿದ್ದಾನೆ.

ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಎ.ಜಿ.ಪೆರಾರಿವಲನ್ ಮೇಲೆ ಸಹ ಕೈದಿಯೊಬ್ಬ ದಾಳಿ ಮಾಡಿದ್ದಾನೆ.
ಜೀವಾವಧಿ ಶಿಕ್ಷೆಗೆ ಒಳಗಾಗಿರುವ ರಾಜೇಶ್ ಎಂಬಾತ ವೆಲ್ಲೋರ್ ಕೇಂದ್ರ ಜೈಲಿನಲ್ಲಿ ಪೆರಾರಿವಲನ್ ಮೇಲೆ ಕಬ್ಬಿಣದ ರಾಡ್‌ನಿಂದ ದಾಳಿ ಮಾಡಿದ್ದಾನೆ. ಗಾಯಗೊಂಡ ಪೆರಾರಿವಲನ್‌ನನ್ನು ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಪೆರಾರಿವಲನ್ ಕೈಗೆ ಗಂಭೀರ ಏಟು ಬಿದ್ದಿದ್ದು, ವೈದ್ಯರು ಆರು ಹೊಲಿಗೆ ಹಾಕಿದ್ದಾರೆ. ಪೆರಾರಿವಲನ್ ಪರ ವಕೀಲ ಶಿವಕುಮಾರ್ ದಾಳಿಯನ್ನು ಖಚಿತಪಡಿಸಿದ್ದಾರೆ. ಉನ್ನತ ಅಧಿಕಾರಿಗಳು ಜೈಲಿಗೆ ಆಗಮಿಸಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.
ರಾಜೀವ್ ಗಾಂಧಿ ಹತ್ಯೆ ಪ್ರಕರಣ ಸಂಬಂಧ ಕಳೆದ 25 ವರ್ಷಗಳಿಂದ ಜೈಲು ವಾಸ ಅನುಭವಿಸುತ್ತಿರುವ ಪೆರಾರಿವಲನ್ ಸೇರಿ 6 ಜನರ ಬಿಡುಗಡೆಗೆ ತಮಿಳುನಾಡು ಸರ್ಕಾರ ನಿರ್ಧರಿಸಿದೆ. ಪ್ರಕರಣ ಸಂಬಂಧ ತನಿಖೆ ನಡೆಸುವಂತೆ ತಮಿಳುನಾಡಿನ ಡಿಜಿ ಆದೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


