ದೇಶ

ಭಾರತಕ್ಕೆ ಆಗಮಿಸಿದ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿಯನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಸೆ.14 ರಿಂದ ಭಾರತ ಪ್ರವಾಸ ಕೈಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಶ್ರಫ್ ಘನಿ ಅವರನ್ನು ಬರಮಾಡಿಕೊಂಡಿದ್ದಾರೆ.

ಭಾರತಕ್ಕೆ ಆಗಮಿಸಿದ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿಯನ್ನು ಸ್ವಾಗತಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
Published On :

ನವದೆಹಲಿ: ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ ಸೆ.14 ರಿಂದ ಭಾರತ ಪ್ರವಾಸ ಕೈಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಶ್ರಫ್ ಘನಿ ಅವರನ್ನು ಬರಮಾಡಿಕೊಂಡಿದ್ದಾರೆ.

ಅಧ್ಯಕ್ಷರಾದ ಬಳಿಕ ಎರಡನೇ ಬಾರಿಗೆ ಅಶ್ರಫ್ ಘನಿ ಭಾರತಕ್ಕೆ ಭೇಟಿ ನೀಡುತ್ತಿದ್ದು, ದ್ವಿಪಕ್ಷೀಯ ಮಾತುಕತೆ ಬಳಿಕ ಭಾರತ- ಅಫ್ಘಾನಿಸ್ತಾನ ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಿವೆ ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಟ್ವೀಟ್ ಮಾಡಿದ್ದಾರೆ.  

ದಿನಾಂತ್ಯದ ವೇಳೆಗೆ ಅಶ್ರಫ್ ಘನಿ ಹಾಗೂ ವಿದೇಶಾಂಗ ಇಲಾಖೆ ರಾಜ್ಯ ಸಚಿವ ವಿ.ಕೆ ಸಿಂಗ್ ವ್ಯಾಪಾರ ಸಭೆಯೊಂದನ್ನುದ್ದೇಶಿಸಿ ಮಾತನಾಡಲಿದ್ದಾರೆ. ಭಾರತ ಪ್ರವಾಸದಲ್ಲಿರುವ ಅಶ್ರಫ್ ಘನಿ ಇನ್ಸ್ಟಿಟ್ಯೂಟ್ ಆಫ್ ಡಿಫೆನ್ಸ್ ಸ್ಟಡೀಸ್ ಹಾಗೂ ಅನಾಲಿಸಿಸ್ ನಲ್ಲಿ ಭಾಷಣ ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.