ದೇಶ

ಟ್ರಕ್'ಗೆ ಬಸ್ ಡಿಕ್ಕಿ: 5 ಮಂದಿ ದುರ್ಮರಣ, 21 ಜನರಿಗೆ ಗಾಯ

ರಾಜ್ಯ ಸಾರಿಗೆ ಬಸ್ ವೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ದುರ್ಮರಣವನ್ನಪ್ಪಿ, 21ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ...

ಟ್ರಕ್'ಗೆ ಬಸ್ ಡಿಕ್ಕಿ: 5 ಮಂದಿ ದುರ್ಮರಣ, 21 ಜನರಿಗೆ ಗಾಯ
ಸಾಂದರ್ಭಿಕ ಚಿತ್ರ
Published On :

ಗೋದ್ರಾ (ಗುಜರಾತ್): ರಾಜ್ಯ ಸಾರಿಗೆ ಬಸ್ ವೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ದುರ್ಮರಣವನ್ನಪ್ಪಿ, 21ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗೋದ್ರಾ-ದಾಹೋದ್ ನ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಾರಿಗೆ ಬಸ್ ವೊಂದು ಹೆದ್ದಾರಿಯಲ್ಲಿ ವೇಗವಾಗಿ ಹೋಗುತ್ತಿತ್ತು. ಪಂಚಮಹಲ್ಸ್ ಜಿಲ್ಲೆಯ ಬಳಿ ಬರುತ್ತಿದ್ದಂತೆ ರಸ್ತೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಟ್ರಕ್ ವೊಂದಕ್ಕೆ ಇದ್ದಕ್ಕಿದ್ದಂತೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ನಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆ ವೇಳೆ ವ್ಯಕ್ತಿಯೊಬ್ಬ ಸೇರಿದಂತೆ ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.