ಶಿವಪಾಲ್ ಯಾದವ್ ಗೆ ಅಖಿಲೇಶ್ ಅಭಿನಂದನೆ, ಪ್ರತಿಭಟನೆ ನಿಲ್ಲಿಸುವಂತೆ ಬೆಂಬಲಿಗರಿಗೆ ಕರೆ
ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಶಿವಪಾಲ್ ಯಾದವ್ ಅವರನ್ನು ಅಭಿನಂದಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್...

Published On :
ಲಖನೌ: ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಶಿವಪಾಲ್ ಯಾದವ್ ಅವರನ್ನು ಅಭಿನಂದಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು, ಪ್ರತಿಭಟನೆ ನಿಲ್ಲಿಸುವಂತೆ ತಮ್ಮ ಬೆಂಬಲಿಗರಿಗೆ ಶನಿವಾರ ಕರೆ ನೀಡಿದ್ದಾರೆ. ಈ ಮೂಲಕ ಪಕ್ಷದಲ್ಲಿ ಎಲ್ಲವೂ ಸರಿ ಇದೆ ಎಂದು ಬಿಂಬಿಸಲು ಯತ್ನಿಸಿದ್ದಾರೆ.
ಶಿವಪಾಲ್ ಯಾದವ್ ಅವರನ್ನು ಎಸ್ಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ನಂತರ ಉಭಯ ನಾಯಕರ ಮಧ್ಯ ತೀವ್ರ ವಾಕ್ಸಮರ ನಡೆದಿತ್ತು. ಕೊನೆಗೆ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರು ಮಧ್ಯಪ್ರವೇಶಿಸಿ ಶಿವಪಾಲ್ ಅವರು ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಹೇಳುವ ಮೂಲಕ ಶಾಂತಿ ಸಂಧಾನ ನಡೆಸಿದ್ದರು.
'ನಾನೇ ಸ್ವತಃ ಶಿವಪಾಲ್ ಅವರ ಮನೆಗೆ ಹೋಗಿ ರಾಜ್ಯಾಧ್ಯಕ್ಷರಾಗಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದೇನೆ. ಶಿವಪಾಲ್ ಜಿ ಅವರಿಗೆ ಎಲ್ಲಾ ರೀತಿಯ ಬೆಂಬಲ ನೀಡುತ್ತೇನೆ' ಎಂದು ಅಖಿಲೇಶ್ ಯಾದವ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ಈ ಮಧ್ಯೆ ಅಖಿಲೇಶ್ ಯಾದವ್ ಬೆಂಬಲಿಗರು ಅಖಿಲೇಶ್ ಅವರನ್ನು ಮತ್ತೆ ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಪಕ್ಷದ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.
ನಿನ್ನೆಯಷ್ಟೇ ಪಕ್ಷದ ಬಿಕ್ಕಟ್ಟು ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಅವರು, ಶಿವಪಾಲ್ ಅವರಿಗೆ ಹಾಗೂ ಗಾಯತ್ರಿ ಪ್ರಜಾಪತಿ ಅವರನ್ನು ಮತ್ತೆ ಪಕ್ಷಕ್ಕೆ ಸೇರ್ಪಡೆಗೊಳಿಸಲಾಗುತ್ತಿದ್ದು, ಮತ್ತೆ ಅವರವರ ಸ್ಥಾನದಲ್ಲಿ ಮುಂದುವರೆಯಲಿದ್ದಾರೆಂದು ಹೇಳಿದ್ದರು. ಮುಲಾಯಂ ಅವರ ಈ ನಿರ್ಧಾರ ಪಕ್ಷದಲ್ಲಿ ಬಾಂಬ್ ಸಿಡಿದಂತೆ ಮಾಡಿತ್ತು. ಅಲ್ಲದೆ, ಪಕ್ಷದೊಳಗಿನ ಆಂತರಿಕ ಯುದ್ಧ ಮತ್ತಷ್ಟು ಹೆಚ್ಚಾಗುವಂತೆ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


