ಸೇನಾ ಪ್ರಧಾನ ಕಚೇರಿ ಮೇಲಿನ ಉಗ್ರ ದಾಳಿಗೆ ಪ್ರಧಾನಿ ಮೋದಿ ಖಂಡನೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ ನ ಸೇನಾ ಪ್ರಧಾನ ಕಚೇರಿ ಮೇಲಿನ ಉಗ್ರರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು...

Published On :
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್ ನ ಸೇನಾ ಪ್ರಧಾನ ಕಚೇರಿ ಮೇಲಿನ ಉಗ್ರರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಉಗ್ರರ ದಾಳಿ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು, ಸೇನಾ ಪ್ರಧಾನ ಕಚೇರಿ ಮೇಲಿನ ಉಗ್ರ ದಾಳಿ ಖಂಡನೀಯ. ಭಾರತದಲ್ಲಿ ದಾಳಿ ನಡೆಸಲು ಉಗ್ರರಿಗೆ ಸಹಾಯ ಮಾಡಿದವರಿಗೆ ತಕ್ಕ ಶಾಸ್ತಿ ಮಾಡಲಾಗುವುದು ಎಂದು ಬರೆದುಕೊಂಡಿದ್ದಾರೆ.
ನಾಲ್ವರು ಉಗ್ರರ ಗುಂಪು ಇಂದು ಬೆಳಿಗ್ಗೆ 5.30ರ ಸುಮಾರಿಗೆ ಸೇನಾ ಪ್ರಧಾನ ಕಚೇರಿ ಮೇಲೆ ದಾಳಿ ನಡೆಸಿತ್ತು. ಗಡಿಯಲ್ಲಿರುವ ಭದ್ರತಾ ಕಂಬಿಗಳನ್ನು ಮುರಿದು ಒಳನುಗ್ಗಿದ ಉಗ್ರರು, ಸೇನಾ ಪ್ರಧಾನ ಕಚೇರಿ ಗೇಟ್ ಬಳಿ ಗ್ರೈನೇಡ್ ಸಿಡಿಸಿ ನಂತರ ಕಚೇರಿಗೆ ನುಗ್ಗಿ ಮನ ಬಂದಂತೆ ಗುಂಡು ಹಾರಿಸಿದ್ದಾರೆ. ಈ ದಾಳಿಯಲ್ಲಿ 17 ಯೋಧರು ಹುತಾತ್ಮರಾಗಿದ್ದಾರೆ.
ಉಗ್ರ ದಾಳಿಯಲ್ಲಿ ಮಡಿದ ಹುತಾತ್ಮ ಯೋಧರಿಗೆ ಸೆಲ್ಯೂಟ್
ಇನ್ನು ಉಗ್ರರ ದಾಳಿಯಲ್ಲಿ ಹುತಾತ್ಮರಾದ 17 ಯೋಧರಿಗೆ ಸೆಲ್ಯೂಟ್ ಮಾಡಿದ್ದಾರೆ. ನಿಮ್ಮ ಅಪೂರ್ವ ಸೇವೆಯನ್ನು ಈ ದೇಶ ಎಂದಿಗೂ ಮರೆಯಲ್ಲಾ. ನಿಮ್ಮ ಅಗಲಿಕೆಯನ್ನು ತಡೆದುಕೊಳ್ಳುವ ಶಕ್ತಿ ದೇವರು ನಿಮ್ಮ ಕುಟುಂಬಕ್ಕೆ ನೀಡಲಿ ಎಂದು ಟ್ವೀಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿಜಮ್ಮು ಮತ್ತು ಕಾಶ್ಮೀರArmyJammu and Kashmirಸೇನೆಉಗ್ರರ ದಾಳಿಕಾರ್ಯಾಚರಣೆoperationterrorist attackUri sectorಉರಿ ಸೆಕ್ಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


