ಕಾಶ್ಮೀರದಲ್ಲಿ ಉಗ್ರ ದಾಳಿ: ತೀವ್ರವಾದಿಗಳಿಗೆ ನೆರವು ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಸಿಪಿಐ(ಎಂ) ಒತ್ತಾಯ
ಜಮ್ಮು-ಕಾಶ್ಮೀರದಲ್ಲಿ 17 ಯೋಧರ ಸಾವಿಗೆ ಕಾರಣವಾಗಿರುವ ಭಯೋತ್ಪಾದಕ ದಾಳಿಯನ್ನು ಸಿಪಿಐ(ಎಂ) ತೀವ್ರವಾದಿಗಳಿಗೆ ನೆರವು ನೀಡುವುದನ್ನು ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಹೇಳಿದೆ.

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ 17 ಯೋಧರ ಸಾವಿಗೆ ಕಾರಣವಾಗಿರುವ ಭಯೋತ್ಪಾದಕ ದಾಳಿಯನ್ನು ಸಿಪಿಐ(ಎಂ) ತೀವ್ರವಾದಿಗಳಿಗೆ ನೆರವು ನೀಡುವುದನ್ನು ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಹೇಳಿದೆ.
ಕಾಶ್ಮೀರ ವಿವಾದದಕ್ಕೆ ಭಯೋತ್ಪಾದನೆ ಪರಿಹಾರವಲ್ಲ ಎಂದು ಸಿಪಿಐ(ಎಂ) ಹಿಂದಿನಿಂದಲೂ ಹೇಳುತ್ತಾ ಬಂದಿದೆ. ಭಯೋತ್ಪಾದಕ ಚಟುವಟಿಕೆಗಳು ಕಾಶ್ಮೀರ ಪ್ರದೇಶದಲ್ಲಿ ಶಾಂತಿ ಕದಡುತ್ತದೆ. ಆದ್ದರಿಂದ ಪಾಕಿಸ್ತಾನ ತೀವ್ರವಾದಿಗಳಿಗೆ ನೆರವು ನೀಡುವುದನ್ನು ಬಿಡಬೇಕು ಎಂದು ಸಿಪಿಐ(ಎಂ) ಹೇಳಿದೆ.
ಇದೆ ವೇಳೆ ಭಾರತ ಸರ್ಕಾರದ ವಿರುದ್ಧವೂ ಸಿಪಿಐ(ಎಂ) ಅಸಮಾಧಾನ ವ್ಯಕ್ತಪಡಿಸಿದ್ದು, ಸೇನಾ ಪ್ರಧಾನ ಕಚೇರಿಯ ಬಳಿ ಸಾಕಷ್ಟು ಸಂಖ್ಯೆಯಲ್ಲಿ ಸೈನಿಕರನ್ನು ನಿಯೋಜಿಸಿದ್ದರೂ ಸಹ ಭಯೋತ್ಪಾದಕರ ದಾಳಿ ನಡೆದಿದೆ. ಉಗ್ರರ ದಾಳಿಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


