ನಟ ಕಪಿಲ್ ಶರ್ಮಾ ವಿರುದ್ಧ ಎಫ್ಐಆರ್ ದಾಖಲು
ಬೃಹತ್ ಮುಂಬಯಿ ಮಹಾನಗರ ಪಾಲಿಕೆ(ಬಿಎಂಸಿ)ಯ ಅಧಿಕಾರಿಗಳು ತನ್ನಿಂದ ಐದು ಲಕ್ಷ ರು. ಲಂಚ ಕೇಳಿ ತನಗೆ ಕಿರುಕುಳ ನೀಡಿದ್ದಾರೆ...

Published On :
ಮುಂಬೈ: ಬೃಹತ್ ಮುಂಬಯಿ ಮಹಾನಗರ ಪಾಲಿಕೆ(ಬಿಎಂಸಿ)ಯ ಅಧಿಕಾರಿಗಳು ತನ್ನಿಂದ ಐದು ಲಕ್ಷ ರು. ಲಂಚ ಕೇಳಿ ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿಗೆ ಟ್ವೀಟ್ ಮಾಡಿದ್ದ ನಟ ಕಪಿಲ್ ಶರ್ಮಾ ಅವರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.
ನಟ ಕಪಿಲ್ ಶರ್ಮಾ ಅವರ ವಿರುದ್ಧ ಪರಿಸರ ಕಾಯ್ದೆ ಉಲ್ಲಂಘಿಸಿ ತಮ್ಮ ಮನೆಯ ಹಿಂದೆ ಅವಶೇಷಗಳನ್ನು ಹಾಕಿದೆ ಆರೋಪದ ಮೇಲೆ ವೆರ್ಸೊವ ಪೊಲೀಸರು ಸೋಮವಾರ ಎಫ್ಐಆರ್ ದಾಖಲಿಸಿದ್ದಾರೆ. ಅಲ್ಲದೆ ಅಕ್ರಮವಾಗಿ ಕಟ್ಟಣ ನಿರ್ಮಿಸುತ್ತಿರುವ ಆರೋಪ ಎದುರಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಪಿಲ್ ಶರ್ಮಾ ಅವರು ಮ್ಯಾಂಗ್ರೋವ್ ನಲ್ಲಿ ಪರಿಸರ ಕಾಯ್ದೆ ಉಲ್ಲಂಘಿಸಿ ಅವಶೇಷಗಳನ್ನು ಡಂಪ್ ಮಾಡಿರುವ ಬಗ್ಗೆ ಸಮೀಕ್ಷೆ ಮಾಡುವಂತೆ ಮುಂಬೈ ಉಪನಗರ ಜಿಲ್ಲಾಧಿಕಾರಿ ದೀಪೇಂದ್ರ ಸಿಂಗ್ ಖುಸ್ವಾ ಅವರು ಆದೇಶಿಸಿದ್ದರು. ಸಮೀಕ್ಷೆಯ ನಂತರ ಅಂದೇರಿ ತಲಾಟಿ ಹ್ಯಾಸ್ಯ ನಟನ ವಿರುದ್ಧ ದೂರು ದಾಖಲಿಸಿದ್ದಾರೆ.
ಪರಿಸರ ಕಾಯ್ದೆಯಡಿ ಕಪಿಲ್ ಶರ್ಮಾ ವಿರುದ್ಧ ನಾವು ಎಫ್ಐಆರ್ ದಾಖಲಿಸಿದ್ದೇವೆ ಎಂದು ಮುಂಬೈ ಪೊಲೀಸ್ ವಕ್ತಾರ ಡಿಸಿಪಿ ಅಶೋಕ್ ದುಧೆ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಪ್ರಧಾನಿಗೆ ಸರಣಿಗೆ ಟ್ವೀಟ್ ಮಾಡಿದ್ದ ಕಪಿಲ್ ಶರ್ಮಾ, 'ನಾವು ಕಳೆದ 5 ವರ್ಷಗಳಲ್ಲಿ ಸುಮಾರು 15 ಕೋಟಿ ರುಪಾಯಿ ಆದಾಯ ತೆರಿಗೆ ಪಾವತಿಸುತ್ತಿದ್ದೇವೆ. ಆದ್ರೂ ನನ್ನ ಆಫೀಸ್‌ನ್ನು ಸುಗಮವಾಗಿ ನಡೆಸಲು 5 ಲಕ್ಷ ರುಪಾಯಿ ಲಂಚ ಕೇಳುತ್ತಿದ್ದಾರೆ. 'ಇದೇನಾ ಅಚ್ಛೇ ದಿನ್' ಪ್ರಶ್ನಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


