ಉರಿ ಸೆಕ್ಟರ್ ದಾಳಿ: ಶ್ರೀನಗರಕ್ಕೆ ಭೇಟಿ ನೀಡಲಿರುವ ಎನ್ಐಎ ತಂಡ
ಉರಿ ಸೆಕ್ಟರ್ ನ ಸೇನಾ ಪ್ರಧಾನ ಕಚೇರಿ ಮೇಲೆ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂದೆ ರಾಷ್ಟ್ರೀಯ ತನಿಖಾ ತಂಡ ಸೋಮವಾರ ಶ್ರೀನಗರಕ್ಕೆ...

ನವದೆಹಲಿ: ಉರಿ ಸೆಕ್ಟರ್ ನ ಸೇನಾ ಪ್ರಧಾನ ಕಚೇರಿ ಮೇಲೆ ಉಗ್ರರು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂದೆ ರಾಷ್ಟ್ರೀಯ ತನಿಖಾ ತಂಡ ಸೋಮವಾರ ಶ್ರೀನಗರಕ್ಕೆ ಭೇಟಿ ನೀಡಲಿದೆ.
ನಿನ್ನೆಯಷ್ಟೇ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದರು. ಉಗ್ರರ ಅಟ್ಟಹಾಸಕ್ಕೆ ಅಂತ್ಯ ಹಾಡಿದ್ದ ಭಾರತೀಯ ಸೇನಾ ದಿಟ್ಟ ಉತ್ತರ ನೀಡುವ ಮೂಲಕ ದಾಳಿ ಮಾಡಿದ್ದ ನಾಲ್ವರೂ ಉಗ್ರರನ್ನು ಸದೆಬಡಿದಿದ್ದರು. ದಾಳಿ ವೇಳೆ 17 ಯೋಧರು ಹುತಾತ್ಮರಾಗಿದ್ದರು.
ಇದರಂತೆ ದಾಳಿ ಸಂಬಂಧ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ತಂಡ ಶ್ರೀನಗರಕ್ಕೆ ಭೇಟಿ ನೀಡಲಿದ್ದು, ಮುಂದಿನ ಹೆಜ್ಜೆಗೆ ಗೃಹ ಸಚಿವಾಲಯದ ನಿರ್ದೇಶನಕ್ಕಾಗಿ ಕಾಯಲಾಗುತ್ತಿದೆ ಎಂದು ಎನ್ಐಎ ವಕ್ತಾರ ಹೇಳಿಕೊಂಡಿದ್ದಾರೆ.
ಇನ್ನು ಉಗ್ರರ ದಾಳಿ ಸಂಬಂಧ ಇಂದು ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ರಾಜಧಾನಿ ದೆಹಲಿಯಲ್ಲಿ ಉನ್ನತ ಮಟ್ಟದ ಸಭೆಯನ್ನು ನಡೆಯುತ್ತಿದ್ದು, ಸಭೆಯಲ್ಲಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಪ್ರಧಾನಿ ಕಚೇರಿಯ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್ ಮತ್ತು ಇನ್ನಿತರೆ ಅಧಿಕಾರಿಗಳು ಹಾಜರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


