ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿದ ಮಿಗ್ 21 ವಿಮಾನ; ಪೈಲಟ್ ಪಾರು!
ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿ ಆಗಬಹುದಾಗಿದ್ದ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು, ಮಿಗ್ 21 ವಿಮಾನವೊಂದು ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿ ಆಗಬಹುದಾಗಿದ್ದ ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು, ಮಿಗ್ 21 ವಿಮಾನವೊಂದು ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿದೆ.
ಅಪಘಾತದಲ್ಲಿ ಪೈಲಟ್ ಅಪಾಯದಿಂದ ಪಾರಾಗಿದ್ದು, ಯಾವುದೇ ಗಾಯಗಳಿಲ್ಲದೇ ಪೈಲಟ್ ಅನ್ನು ಹೊರ ತೆಗೆಯಲಾಗಿದೆ. ಮೂಲಗಳ ಪ್ರಕಾರ ಲ್ಯಾಂಡಿಂಗ್ ವೇಳೆ ವಿಮಾನ ಪೈಲಟ್ ನ ನಿಯಂತ್ರಣ ತಪ್ಪಿದೆ. ಈ ವೇಳೆ ವಿಮಾನದ ರೆಕ್ಕೆ ರನ್ ವೇ ಗೆ ಉಜ್ಜಿ ಕೊಂಚ ದೂರ ಹಾಗೆಯೇ ಚಲಿಸಿದೆ. ಬಳಿಕ ನಿಂತ ವಿಮಾನದಿಂದ ಕೂಡಲೇ ರಕ್ಷಣಾ ಸಿಬ್ಬಂದಿಗಳು ಪೈಲಟ್ ನನ್ನು ಹೊರಗೆಳೆದಿದ್ದಾರೆ. ಘಟನೆಯಿಂದಾಗಿ ವಿಮಾನಕ್ಕೆ ಹಾನಿಯಾಗಿದ್ದು, ಇದೀಗ ವಿಮಾನವನ್ನು ರನ್ ವೇಯಿಂದ ಪಕ್ಕಕ್ಕೆ ಸರಿಸಲಾಗಿದೆ.
ಅಪಘಾತದಿಂದಾಗಿ ರನ್ ವೇ ಅಲ್ಪ ಪ್ರಮಾಣದ ಹಾನಿಯಾಗಿದ್ದು, ತಾತ್ಕಾಲಿಕವಾಗಿ ಶ್ರೀನಗರ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


