ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರವೆಂದು ಘೋಷಿಸಿ: ಡೇರಾ ಸಚ್ಚಾ ಸೌದಾ ಮುಖ್ಯಸ್ಥ
ಯೋಧರು ಮಲಗಿರುವಾಗ ಅವರ ಮೇಲೆ ದಾಳಿ ನಡೆಸಿ ಹತ್ಯೆ ಮಾಡುವುದು ಹೇಡಿತನದ ಪರಮಾವಧಿ ಎಂದಿರುವ ಡೇರಾ ಸಚ್ಚಾ ಸೌದಾ ಸಂಘಟನೆ ಮುಖ್ಯಸ್ಥ ಗುರ್‌ಮೀತ್ ರಾಮ್ ರಹೀಮ್ ಸಿಂಗ್.....

ಚಂಡೀಗಢ: ಯೋಧರು ಮಲಗಿರುವಾಗ ಅವರ ಮೇಲೆ ದಾಳಿ ನಡೆಸಿ ಹತ್ಯೆ ಮಾಡುವುದು ಹೇಡಿತನದ ಪರಮಾವಧಿ ಎಂದಿರುವ ಡೇರಾ ಸಚ್ಚಾ ಸೌದಾ ಸಂಘಟನೆ ಮುಖ್ಯಸ್ಥ ಗುರ್‌ಮೀತ್ ರಾಮ್ ರಹೀಮ್ ಸಿಂಗ್, ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರವೆಂದು ಘೋಷಿಸಲು ಆಗ್ರಹಿಸಿದ್ದಾರೆ.
ಉರಿಯಲ್ಲಿ ಉಗ್ರ ದಾಳಿ ನಡೆದಿರುವುದರ ಬಗ್ಗೆ ಈಗಾಗಲೇ ಸಾಕಷ್ಟು ಹೇಳಿಕೆಗಳು ಬಂದಿವೆ. ಆದರೆ ಪಾಕಿಸ್ತಾನದ ವಿಷಯವಾಗಿ ಏನನ್ನೂ ಮಾಡಲಾಗಿಲ್ಲ ಎಂದು ಗುರ್‌ಮೀತ್ ರಾಮ್ ರಹೀಮ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದು, ಪಾಕಿಸ್ತಾನವನ್ನು ಉಗ್ರ ರಾಷ್ಟ್ರ ಎಂದು ಗುರುತಿಸಬೇಕು ಎಂದು ಹೇಳಿದ್ದಾರೆ. ಭಯೋತ್ಪಾದನೆಯನ್ನು ಖಂಡಿಸುವ ಹೇಳಿಕೆಗಳು ಸಾಕಾಗುವುದಿಲ್ಲ. ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ಘೋಷಿಸಲು ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೇರಬೇಕು ಎಂದು ಹೇಳಿದ್ದಾರೆ.
ಪಾಕಿಸ್ತಾನಕ್ಕೆ ಸಿಗುತ್ತಿರುವ ಹಣಕಾಸಿನ ನೆರವನ್ನು ಸ್ಥಗಿತಗೊಳಿಸಿದರೆ ಮಾತ್ರ ಪಾಕ್ ಭಯೋತ್ಪಾದನೆಯನ್ನು ಬಿಡುತ್ತದೆ ಎಂದು ರಾಮ್ ರಹೀಮ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


