ಉರಿ ದಾಳಿ: ಎನ್ಐಎದಿಂದ ಉಗ್ರರ ಡಿಎನ್ಎ ಮಾದರಿ ಸಂಗ್ರಹ
ಉರಿ ಉಗ್ರ ದಾಳಿಗೆ ಸಂಬಂಧಿಸಿದಂತೆ ಮಂಗಳವಾರ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)....

Published On :
ಶ್ರೀನಗರ: ಉರಿ ಉಗ್ರ ದಾಳಿಗೆ ಸಂಬಂಧಿಸಿದಂತೆ ಮಂಗಳವಾರ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ), ಪಾಕಿಸ್ತಾನಿ ಉಗ್ರರ ಗುರುತು ಖಚಿತಪಡಿಸಿಕೊಳ್ಳುವುದಕ್ಕಾಗಿ ಮೃತ ಉಗ್ರರ ಡಿಎನ್ಎ ಮಾದರಿ ಸಂಗ್ರಹಿಸಲು ನಿರ್ಧರಿಸಿದೆ.
ಇಂದಿನಿಂದ ಉರಿ ದಾಳಿ ಪ್ರಕರಣದ ತನಿಖೆ ಆರಂಭಿಸಿರುವ ಎನ್ಐಎ ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಹಾಗೂ ಸೇನೆಯಿಂದ ದಾಳಿ ನಡೆದ ಉರಿ ಸೆಕ್ಟರ್ ನಲ್ಲಿ ಪತ್ತೆಯಾದ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ.
ಉಗ್ರ ದಾಳಿಯ ವೇಳೆ ಮೃತಪಟ್ಟ ನಾಲ್ವರು ಉಗ್ರರ ಡಿಎನ್ಎ ಮಾದರಿ ಸಂಗ್ರಹಿಸಲು ಎನ್ಐಎ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ,
ಭಾನುವಾರ ಮುಂಜಾನೆ ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಭೀಕರ ಉಗ್ರ ದಾಳಿ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ದಾಳಿ ನಡೆದ ಉರಿ ಸೆಕ್ಟರ್ ಗೆ ಭೇಟಿ ನೀಡಿದ್ದಾರೆ. ಈ ವೇಳೆ ಸ್ಥಳದಲ್ಲಿ ಪತ್ತೆಯಾದ ಕೆಲ ಔಷಧಿಗಳು, ಹಸಿವಾದಾಗ ತಿನ್ನಲು ಉಗ್ರರು ತಂದಿದ್ದ ಹೈಪ್ರೊಟೀನ್ ಚಾಕಲೇಟ್ ಗಳು, ಸುಸ್ತಾದಾಗ ಸೇವಿಸಲು ತಂದಿದ್ದ ಒಆರ್ ಎಸ್ ಪ್ಯಾಕೆಟ್ ಗಳು ಪತ್ತೆಯಾಗಿದ್ದು, ಈ ಎಲ್ಲ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಪಾಕ್ ನಿರ್ಮಿತ ಜಿಪಿಎಸ್ ಸೆಟ್ ವಶ, ತಪಾಸಣೆಗಾಗಿ ಅಮೆರಿಕಕ್ಕೆ ರವಾನೆ
ಇದೇ ವೇಳೆ ಘಟನಾ ಸ್ಥಳದಲ್ಲಿ ಉಗ್ರರು ಬಳಕೆ ಮಾಡಿದ್ದ ಜಿಪಿಎಸ್ ಸೆಟ್ ದೊರೆತಿದ್ದು, ಇದನ್ನು ಪರಿಶೀಲಿಸಿದಾಗ ಇದರ ಲೊಕೇಶನ್ ಪಾಕ್ ಆಕ್ರಮಿತ ಕಾಶ್ಮೀರದ ರಷಿಯಾಬಾದ್- ಮುಷಿರಾಬಾದ್ ಎಂದು ತೋರಿಸುತ್ತಿದೆ. ಹೀಗಾಗಿ ಇದರ ಹೆಚ್ಚಿನ ಅಧ್ಯಯನಕ್ಕಾಗಿ ಅಮೆರಿಕಕ್ಕೆ ಜಿಪಿಎಸ್ ಸೆಟ್ ಅನ್ನು ಕಳುಹಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರಿಗೆ ಆಶ್ರಯ ನೀಡಿದ ಕುರಿಗಾಹಿಗಳ ತೀವ್ರ ವಿಚಾರಣೆ
ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಆರು ಮಂದಿ ಎನ್ ಐಎ ಅಧಿಕಾರಿಗಳ ತಂಡ ಉರಿ ಸೆಕ್ಟರ್ ನಲ್ಲಿದ್ದ ಮೂವರು ಕುರಿಗಾಹಿಗಳನ್ನು ವಶಕ್ಕೆ ಪಡೆದಿದ್ದು, ಉಗ್ರರಿಗೆ ಆಶ್ರಯ ನೀಡಿದ ಆರೋಪದ ಮೇರೆಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಉಗ್ರರು ದಾಳಿ ನಡೆಸುವ ಮುನ್ನ ಇದೇ ಕುರಿಗಾಹಿಗಳಿಂದ ನೆರವು ಪಡೆದಿದ್ದರು ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


