ಡಿಸಿಡಬ್ಲ್ಯೂ ಭ್ರಷ್ಟಾಚಾರ: ಸ್ವಾತಿ ಮಲಿವಾಲ್ ವಿರುದ್ಧದ ಎಫ್ಐಆರ್ ನಲ್ಲಿ ಕೇಜ್ರಿವಾಲ್ ಹೆಸರು
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ. ಭ್ರಷ್ಟಾಚಾರ ಪ್ರಕರಣ ಸಂಬಂಧ ದೆಹಲಿ ಮಹಿಳಾ....

Published On :
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮತ್ತೊಂದು ಕಂಟಕ ಎದುರಾಗಿದೆ. ಭ್ರಷ್ಟಾಚಾರ ಪ್ರಕರಣ ಸಂಬಂಧ ದೆಹಲಿ ಮಹಿಳಾ ಆಯೋಗ(ಡಿಸಿಡಬ್ಲ್ಯೂ)ದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರ ವಿರುದ್ಧದ ಎಫ್ಐಆರ್ ನಲ್ಲಿ ಆಪ್ ಮುಖ್ಯಸ್ಥನ ಹೆಸರು ಸೇರಿಸಲಾಗಿದ್ದು, ಅಕ್ರಮಗಳಲ್ಲೇ ದೆಹಲಿ ಸಿಎಂ ಭಾಗಿಯಾಗಿದ್ದಾರೆಯೇ? ಎಂಬ ಪ್ರಶ್ನೆ ಉದ್ಭವಿಸಿದೆ.
ಡಿಸಿಡಬ್ಲ್ಯೂ ನಲ್ಲಿ ಅಕ್ರಮ ನೇಮಕಾತಿ ನಡೆದಿದೆ ಎಂಬ ಆರೋಪದ ಮೇಲೆ ಸ್ವಾತಿ ಮಲಿವಾರ್ ಅವರ ವಿರುದ್ಧ ದೆಹಲಿ ಸರ್ಕಾರದ ಭ್ರಷ್ಟಾಚಾರ ನಿಗ್ರಹ ಪಡೆ(ಎಸಿಬಿ) ಎಫ್ಐಆರ್ ದಾಖಲಿಸಿದ್ದು, ಅದರಲ್ಲಿ ದೆಹಲಿ ಸಿಎಂ ಹೆಸರು ಉಲ್ಲೇಖಿಸಿದೆ.
ಡಿಸಿಡಬ್ಲ್ಯೂ ಮಾಜಿ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ನಾಯಕಿ ಭರ್ಖಾ ಸಿಂಗ್ ಶುಕ್ಲಾ ಅವರು ಮಲಿವಾಲ್ ವಿರುದ್ಧ ಎಸಿಬಿಗೆ ದೂರು ನೀಡಿದ್ದರು.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಅರವಿಂದ್ ಕೇಜ್ರಿವಾಲ್ ಅವರು, 'ಎಫ್ಐಆರ್ ನಲ್ಲಿ ನನ್ನ ಹೆಸರು ಏಕೆ ಬಂತು ಗೊತ್ತಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಒಪ್ಪಿಗೆ ಇಲ್ಲದೆ ಎಫ್ಐಆರ್ ನಲ್ಲಿ ನನ್ನ ಹೆಸರು ಬರಲು ಸಾಧ್ಯವೆ ಇಲ್ಲ' ಎಂದಿದ್ದಾರೆ.
ಇದರಲ್ಲಿ ನನ್ನ ಪಾತ್ರ ಏನಿದೆ? ಎಂದು ಪ್ರಶ್ನಿಸಿರುವ ಕೇಜ್ರಿವಾಲ್, ಇದುವರೆಗೆ ಒಂದೇ ಒಂದು ಬಾರಿ ಎಫ್ಐಆರ್ ನಲ್ಲಿ ನನ್ನ ಹೆಸರು ಪ್ರಸ್ತಾಪವಾಗಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


