ಉರಿ ದಾಳಿ ವಿರುದ್ಧ ತಿರುಗಿ ಬಿದ್ದ ಭಾರತೀಯ ಸೇನೆ: ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ 20 ಉಗ್ರರ ಹತ್ಯೆ?
ಉರಿ ಉಗ್ರ ದಾಳಿ ಬೆನ್ನಲ್ಲೇ ಭಾರತೀಯ ಸೇನೆ ಪಾಕಿಸ್ತಾನದ ವಿರುದ್ಧ ತಿರುಗಿಬಿದ್ದಿದ್ದು, ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿವೆ ಎಂದು ಹೇಳಲಾಗುತ್ತಿದೆ.

ನವದೆಹಲಿ: ಉರಿ ಉಗ್ರ ದಾಳಿ ಬೆನ್ನಲ್ಲೇ ಭಾರತೀಯ ಸೇನೆ ಪಾಕಿಸ್ತಾನದ ವಿರುದ್ಧ ತಿರುಗಿಬಿದ್ದಿದ್ದು, ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿವೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಖಾಸಗಿ ಸುದ್ದಿಮಾಧ್ಯಮವೊಂದು ವರದಿ ಮಾಡಿದ್ದು, ಜಮ್ಮು-ಕಾಶ್ಮೀರದ ಉರಿಯಲ್ಲಿ ಸೇನಾ ನೆಲೆ ಮೇಲೆ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನಾಪಡೆಗಳು ಗಡಿ ದಾಟಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ 3 ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿವೆ ಎಂದು ಹೇಳಿದೆ. ಸೇನೆಯ ಎರಡು ತುಕಡಿಗಳ ಸುಮಾರು 18 ರಿಂದ 20 ಯೋಧರ ತಂಡ ಈ ದಾಳಿ ನಡೆಸಿದ್ದು, ದಾಳಿ ವೇಳೆ ಉಗ್ರರ ಮೂರು ನೆಲಗಳನ್ನು ನಾಶಪಡಿಸಿವೆ ಎಂದು ತಿಳಿದುಬಂದಿದೆ.
ಈ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು 20 ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಸುಮಾರು 200ಕ್ಕೂ ಹೆಚ್ಚು ಉಗ್ರರು ಗಾಯಗೊಂಡಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಈ ವಿಶೇಷ ಕಾರ್ಯಾಚರಣೆಯಲ್ಲಿ ಸೇನಾ ಹೆಲಿಕಾಪ್ಟರ್ ಗಳನ್ನು ಬಳಕೆ ಮಾಡಿಕೊಳ್ಳಲಾಗಿದ್ದು, ಸ್ವತಃ ಸೇನಾ ಮೂಲಗಳೇ ದಾಳಿಯನ್ನು ಖಚಿತಪಡಿಸಿವೆ ಎಂದು ವೆಬ್ ಸೈಟ್ ವರದಿ ಮಾಡಿದ್ದು, ಈ ದಾಳಿಯಿಂದಾಗಿಯೇ ಪಾಕಿಸ್ತಾನ ಈ ಭಾಗದಲ್ಲಿ ವಿಮಾನ ಹಾರಾಟ ರದ್ದುಗೊಳಿಸಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಆದರೆ ಈ ವರದಿ ಬಗ್ಗೆ ಭಾರತೀಯ ಸೇನೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


