6 ಕೆಪಿಎಲ್‌ಟಿ ಉಗ್ರರ ಹತ್ಯೆ ಮಾಡಿದ ಭಾರತೀಯ ಸೇನೆ
ಕಾರ್ಬಿ ಪೀಪಲ್ಸ್ ಲಿಬರೇಷನ್ ಟೈಗರ್(ಕೆಪಿಎಲ್‌ಟಿ) ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಹಿರಿಯ ನಾಯಕರು ಸೇರಿದಂತೆ ಆರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ...

Published On :
ದಿಪು(ಅಸ್ಸಾಂ): ಕಾರ್ಬಿ ಪೀಪಲ್ಸ್ ಲಿಬರೇಷನ್ ಟೈಗರ್(ಕೆಪಿಎಲ್‌ಟಿ) ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಹಿರಿಯ ನಾಯಕರು ಸೇರಿದಂತೆ ಆರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಅಸ್ಸಾಂಮಿನ ಕಾರ್ಬಿ ಆಂಗ್ಲಾಂಗ್ ಜಿಲ್ಲೆಯ ಬನ್ನಿಪತ್ತರ್ ನಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಹಿನ್ನೆಲೆ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವಿನ ಗುಂಡಿನ ಕಾಳಗದಲ್ಲಿ 6 ಮಂದಿ ಉಗ್ರರು ಹತರಾಗಿದ್ದು, ಓರ್ವ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಎಸ್ಪಿ ಹೇಳಿದ್ದಾರೆ.
ಈ ಉಗ್ರ ದಮನ ಕಾರ್ಯಾಚರಣೆಯಲ್ಲಿ ಸಂಘಟನೆಯ ಹಿರಿಯ ನಾಯಕರನ್ನು ಹತ್ಯೆ ಮಾಡಿರುವುದಾಗಿ ಶಂಕಿಸಲಾಗಿದ್ದು. ಉಗ್ರರ ಗುರುತು ಪಚ್ಚೆ ಹಚ್ಚಲಾಗುತ್ತಿದೆ ಎಂದು ಎಸ್ಪಿ ಹೇಳಿದ್ದಾರೆ.
ಗುಂಡಿನ ಕಾಳದಲ್ಲಿ ಗಾಯಗೊಂಡಿರುವ ಭದ್ರತಾ ಸಿಬ್ಬಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಉಗ್ರರಿಂದ ಒಂದು ಎಸ್ಎಲ್ಆರ್ ರೈಫಲ್, ಒಂದು ಇನ್ಸಾಸ್ ರೈಫಲ್, ಮೂರು ಪಿಸ್ತೂಲ್ ಹಾಗೂ ಎರಡು ಗ್ರೈನೇಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


