ದೇಶ

ಸಿವಾನ್ ಪತ್ರಕರ್ತನ ಕೊಲೆ ಪ್ರಕರಣ: ಲಾಲು ಪುತ್ರ ತೇಜ್ ಪ್ರತಾಪ್ ಗೆ ಸುಪ್ರೀಂ ನೋಟಿಸ್

ಸಿವಾನ್ ಪತ್ರಕರ್ತ ರಾಜ್ ದಿಯೊ ರಂಜನ್ ಕೊಲೆ ಪ್ರಕರಣ ಸಂಬಂಧ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರ,...

ಸಿವಾನ್ ಪತ್ರಕರ್ತನ ಕೊಲೆ ಪ್ರಕರಣ: ಲಾಲು ಪುತ್ರ ತೇಜ್ ಪ್ರತಾಪ್ ಗೆ ಸುಪ್ರೀಂ ನೋಟಿಸ್
ತೇಜ್ ಪ್ರತಾಪ್ ಯಾದವ್
Published On :
ನವದೆಹಲಿ: ಸಿವಾನ್ ಪತ್ರಕರ್ತ ರಾಜ್ ದಿಯೊ ರಂಜನ್ ಕೊಲೆ ಪ್ರಕರಣ ಸಂಬಂಧ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರ, ಆರೋಗ್ಯ ಸಚಿವ ತೇಜ್ ಪ್ರತಾಪ್ ಯಾದವ್ ಮತ್ತು ಆರ್ ಜೆಡಿ ಮಾಜಿ ಸಂಸದ ಮೊಹಮ್ಮದ್ ಶಹಾಬುದ್ದೀನ್ ಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.
ಬಿಹಾರದಲ್ಲಿ ಪಾರದರ್ಶಕ ತನಿಖೆ ಸಾಧ್ಯವಿಲ್ಲ. ಹೀಗಾಗಿ ಪ್ರಕರಣವನ್ನು ದೆಹಲಿಗೆ ವರ್ಗಾಹಿಸಿ ಎಂದು ಕೋರಿ ಕೊಲೆಯಾದ ಪತ್ರಕರ್ತನ ಪತ್ನಿ ಆಶಾ ರಂಜನ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರ ಮತ್ತು ನ್ಯಾಯಮೂರ್ತಿ ಸಿ.ನಾಗಪ್ಪನ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಬಿಹಾರ ಸರ್ಕಾರ ಹಾಗೂ ತನಿಖಾ ಸಂಸ್ಥೆ ಸಿಬಿಐಗೂ ನೋಟಿಸ್ ಜಾರಿ ಮಾಡಿದೆ.
ಪತ್ರಕರ್ತನ ಹತ್ಯೆಯ ಸಿಬಿಐ ತನಿಖೆಗೆ ಸಂಬಂಧಿಸಿದಂತೆ ಮೇಲುಸ್ತುವಾರಿ ವಹಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದ್ದು, ಎರಡು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಆರೋಪಿಗಳಿಗೆ ಹಾಗೂ ಬಿಹಾರ ಸರ್ಕಾರಕ್ಕೆ ಸೂಚಿಸಿದೆ. ಅಲ್ಲದೆ ಪತ್ರಕರ್ತನ ಪತ್ನಿಗೆ ಸೂಕ್ತ ರಕ್ಷಣೆ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಅಕ್ಟೋಬರ್ 17ಕ್ಕೆ ಮುಂದೂಡಿದೆ.
ರಂಜನ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಶಹಾಬುದ್ದೀನ್‌ ಸಹಚರ ಮೊಹಮ್ಮದ್ ಕೈಫ್ ಅಲಿಯಾಸ್ ಬಂಟಿ ಜತೆ ಲಾಲು ಪ್ರಸಾದ್‌ ಯಾದವ್‌ ಪುತ್ರ ತೇಜ್ ಪ್ರತಾಪ್ ತೆಗೆಸಿಕೊಂಡಿರುವ ಚಿತ್ರ ವೈರಲ್ ಆಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.