ದೇಶ

ದನದ ಶವ ವಿಲೇವಾರಿಗೆ ನಕಾರ: ಗುಜರಾತ್ ನಲ್ಲಿ ಗರ್ಭಿಣಿ ಸೇರಿದಂತೆ ದಲಿತರ ಮೇಲೆ ಹಲ್ಲೆ: ಆರು ಮಂದಿ ವಶ

ದನದ ಶವ ವಿಲೇವಾರಿ ಮಾಡಲು ನಿರಾಕರಿಸಿದ್ದಕ್ಕೆ ಗರ್ಭಿಣಿ ಮಹಿಳೆ ಸೇರಿದಂತೆ ದಲಿತ ಕುಟುಂಬದ ಸದಸ್ಯರ ಮೇಲೆ ಹಲ್ಲೆ ...

ದನದ ಶವ ವಿಲೇವಾರಿಗೆ ನಕಾರ: ಗುಜರಾತ್ ನಲ್ಲಿ ಗರ್ಭಿಣಿ ಸೇರಿದಂತೆ ದಲಿತರ ಮೇಲೆ ಹಲ್ಲೆ: ಆರು ಮಂದಿ ವಶ
ಸಾಂದರ್ಭಿಕ ಚಿತ್ರ
Published On :
ಬನಸ್ಕಾಂತ(ಗುಜರಾತ್); ದನದ ಶವ ವಿಲೇವಾರಿ ಮಾಡಲು ನಿರಾಕರಿಸಿದ್ದಕ್ಕೆ ಗರ್ಭಿಣಿ ಮಹಿಳೆ ಸೇರಿದಂತೆ ದಲಿತ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಗುಜರಾತ್ ನ ಬನ್ಸಾಕಾಂತಾ ಜಿಲ್ಲೆಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ದರ್ಬಾರ್ ಸಮುದಾಯಕ್ಕೆ ಸೇರಿದ್ದ ಸುಮಾರು 10 ಮಂದಿ ಏಕಾಏಕಿ ಮನೆನುಗ್ಗಿ ಹಲ್ಲೆ ನಡೆಸಿದ್ದು, ಈ ಸಂದರ್ಭದಲ್ಲಿ ತನ್ನ ಗರ್ಭಿಣಿ ಪತ್ನಿ ಸಂಗೀತಾ ಸೇರಿದಂತೆ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ದನದ ಶವವನ್ನು ವಿಲೇವಾರಿ ಮಾಡಲು ನಿರಾಕರಿಸಿದ್ದಕ್ಕೆ ಈ ಕೃತ್ಯ ಎಸಗಿರುವುದಾಗಿ ಹೇಳಲಾಗಿದೆ.
ಸಂಗೀತಾಳನ್ನು ಪಾಲಾನ್ಪುರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಲೇಶ್ ಮತ್ತು ಉಳಿದವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ನಂತರ ಬಿಡುಗಡೆ ಮಾಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. 
ಇತ್ತೀಚೆಗೆ ಗುಜರಾತ್ ನಲ್ಲಿ ದನದ ಮಾಂಸ ಸುಲಿಯುತ್ತಿದ್ದರು ಎಂದು ಆರೋಪಿಸಿ ಯುವಕರ ಗುಂಪೊಂದು ತೀವ್ರ ಹಲ್ಲೆ ನಡೆಸಿದ್ದು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಆ ಘಟನೆ ಮಾಸುವ ಮುನ್ನವೇ ಮತ್ತೊಂದು ಅಂತಹ ಪ್ರಕರಣ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.