ಪಾಕ್ ಕುರಿತಂತೆ ಮೋದಿ ಹೇಳಿಕೆ ಬೇಸರ ತಂದಿದೆ: ಜೆಡಿ(ಯು)
ದೇಶದ ಜನತೆ ಹೊಸ ದಿಕ್ಕಿನ ಕಡೆಗೆ ಎದುರು ನೋಡುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಾಕಿಸ್ತಾನ ಕುರಿತಂತೆ ನೀಡಿದ್ದ ಹೇಳಿಕೆ ಬೇಸರವನ್ನುಂಟು ಮಾಡಿದೆ ಎಂದು ಜನತಾದಳ (ಸಂಯುಕ್ತ) ಭಾನುವಾರ..

ನವದೆಹಲಿ: ದೇಶದ ಜನತೆ ಹೊಸ ದಿಕ್ಕಿನ ಕಡೆಗೆ ಎದುರು ನೋಡುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಾಕಿಸ್ತಾನ ಕುರಿತಂತೆ ನೀಡಿದ್ದ ಹೇಳಿಕೆ ಬೇಸರವನ್ನುಂಟು ಮಾಡಿದೆ ಎಂದು ಜನತಾದಳ (ಸಂಯುಕ್ತ) ಭಾನುವಾರ ಹೇಳಿದೆ,
ಈ ಕುರಿತಂತೆ ಮಾತನಾಡಿರುವ ಜೆಡಿಯು ನಾಯಕ ಕೆಸಿ. ತ್ಯಾಗಿ ಅವರು, ಪಾಕಿಸ್ತಾನ ಭಯೋತ್ಪಾದನೆಯನ್ನು ಪ್ರಾಯೋಜಿಸುತ್ತಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಮೋದಿಯವರು ನಿನ್ನೆ ಏನು ಮಾತನಾಡಿದ್ದಾರೋ ಅದನ್ನು ಇಡೀ ವಿಶ್ವವೇ ಈಗಾಗಲೇ ಮಾತನಾಡಿದೆ. ಮೋದಿಯವರು ಭಾಷಣ ಮಾಡುತ್ತಾರೆಂದರೆ ಜನತೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿರುತ್ತಾರೆ. ಈ ನಿರೀಕ್ಷೆಗಳು ನಿನ್ನೆ ಹುಸಿಯಾಗಿದೆ ಎಂದು ಹೇಳಿದ್ದಾರೆ.
ಮೋದಿಯವರು ಭಾಷಣ ಮಾಡುತ್ತಿದ್ದು, ಹೊಸ ನಿರ್ದೇಶನ, ಹೊಸ ದಿಕ್ಕಿನ ಬಗ್ಗೆ ಮಾತನಾಡುತ್ತಾರೆಂದು ಜನರು ನಂಬಿದ್ದರು. ಆದರೆ, ಭಾಷಣದುದ್ದಕ್ಕೂ ಮೋದಿಯವರು ಪಾಕಿಸ್ತಾನದ ಬಗ್ಗೆಯೇ ಮಾತನಾಡಿದ್ದರು. ಇದು ನಿಜಕ್ಕೂ ಬೇಸರವನ್ನುಂಟುಮಾಡಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


